ಊಂತನಾಜೆ : ಪ್ರಕೃತಿ ವಿಕೋಪ ನಷ್ಟಕ್ಕೊಳಗಾದ ಕುಟುಂಬಗಳಿಗೆ ಸಹಾಯಧನ ವಿತರಣೆ

ಮೊಗ್ರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ಗುರುವಾಯನಕೆರೆ ಹಾಗೂ ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಕಣಿಯೂರು ವಲಯ ಇದರ ವತಿಯಿಂದ ಪ್ರಕೃತಿ ವಿಕೋಪದಿಂದ ನಷ್ಟಕ್ಕೊಳಗಾದ ಕುಟುಂಬಗಳಿಗೆ ಸಹಾಯಧನ ವಿತರಣಾ ಕಾರ್ಯಕ್ರಮವು ಮೊಗ್ರು ಊಂತನಾಜೆ  ಶ್ರೀ ಲಕ್ಷ್ಮೀ ನಾರಾಯಣ ಭಜನಾ ಮಂದಿರದಲ್ಲಿ ಇತ್ತಿಚಿಗೆ ನೆರವೇರಿತು.

ಜಿಲ್ಲಾ ಪಂಚಾಯತ್ ಸದಸ್ಯ ಶಾಹುಲ್ ಹಮೀದ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ನಾನೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಫಲಾನುಭವಿ, ಬಡವರ ಸೇವೆಗಾಗಿ ಹುಟ್ಟಿದ ಯೋಜನೆಯು ಪ್ರಾರಂಭದಿಂದಲೇ ಬಡವರ ಕಷ್ಟ,ನಷ್ಟಗಳಿಗೆ ನಿರಂತರವಾಗಿ ಸ್ಪಂದಿಸುತ್ತಾ ಬಂದಿದೆ, ಇದೇ ಕಾರಣದಿಂದ ಬಡವರು ಯೋಜನೆಯ ಪ್ರತಿಯೊಂದು ಸಮಾಜಮುಖಿ ಕಾರ್ಯಕ್ರಮಗಳೊಂದಿಗೆ ಉತ್ಸಾಹದಿಂದ ಪಾಲ್ಗೊಳ್ಳುವ ಮೂಲಕ ಸೇವಾ ಕಾರ್ಯಗಳನ್ನು ಬೆಂಬಲಿಸುತ್ತಾ ಬಂದಿದ್ದಾರೆ ಎಂದು ಪ್ರಶಂಸಿಸಿ
ಸಹಾಯಧನ ವಿತರಣಾ ಕಾರ್ಯಕ್ರಮದ ಆಯೋಜಕರಿಗೆ ಅಭಿನಂದನೆ ಸಲ್ಲಿಸಿ ಶುಭಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಪಂಚಾಯತ್ ಸದಸ್ಯ ಕೃಷ್ಣಯ್ಯ ಆಚಾರ್ಯ ಅವರು ವಹಿಸಿ ಶುಭಹಾರೈಸಿದರು. ಇತ್ತೀಚೆಗೆ ಪ್ರಕೃತಿ ವಿಕೋಪದಿಂದ ಕೃಷಿ,ಮನೆ ಇತ್ಯಾದಿಗಳಿಗೆ ಹಾನಿಗೊಳಗಾದ 25 ಫಲಾನುಭವಿಗಳಿಗೆ ಸಹಾಯಧನ ವಿತರಿಸಲಾಯಿತು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಗ್ರಾಮಾಭಿವೃದ್ಧಿ ಯೋಜನೆ ಉಡುಪಿ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ವಸಂತ ಸಾಲ್ಯಾನ್, ತಾಲೂಕು ಪ್ರಗತಿಬಂಧು ಒಕ್ಕೂಟದ ಅಧ್ಯಕ್ಷರಾದ ಪ್ರಭಾಕರ ಪೊಸಂತೋಡಿ, ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷೆ ಶಾರದಾ ಆರ್ ರೈ, ರೈತಬಂಧು ಆಹಾರೋದ್ಯಮ ಮಾರುತಿಪುರ ಇದರ ಮಾಲಕರಾದ ಉದ್ಯಮಿ ಶಿವಶಂಕರ್ನಾ ಯಕ್, ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷರಾದ ಉದಯ ಕುಮಾರ್ ಬಿ.ಕೆ. , ಮೊಗ್ರು ಪ್ರಗತಿಬಂಧು ಒಕ್ಕೂಟದ ಅಧ್ಯಕ್ಷರಾದ ಲೋಕೇಶ್ ಡಿ. ಉಪಸ್ಥಿತರಿದ್ದರು.

ಜಿಲ್ಲಾ ನಿರ್ದೇಶಕರಾದ ಸತೀಶ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುರುವಾಯನಕೆರೆ ತಾಲೂಕು ಯೋಜನಾಧಿಕಾರಿ ಯಶವಂತ್ ಸ್ವಾಗತಿಸಿ ವಲಯ ಮೇಲ್ವಿಚಾರಕ ಮಾಧವ ಎಂ. ಕಾರ್ಯಕ್ರಮ ನಿರೂಪಿಸಿದರು. ಪ್ರಾರಂಭದಲ್ಲಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷೆ ಚಂದ್ರಾವತಿ ಕೆ.ವೈ. ಪ್ರಾರ್ಥನೆ ನೆರವೇರಿಸಿ ಕೊನೆಯಲ್ಲಿ ಉರುವಾಲು ಸೇವಾಪ್ರತಿನಿಧಿ ಸೀತಾರಾಮ ವಂದಿಸಿದರು.  ಕಣಿಯೂರು ವಲಯ ವ್ಯಾಪ್ತಿಯ ಸೇವಾಪ್ರತಿನಿಧಿಗಳು, ಒಕ್ಕೂಟಗಳ ಅಧ್ಯಕ್ಷರು, ವಿಪತ್ತು ನಿರ್ವಹಣೆ ತಂಡದ ಸದಸ್ಯರು, ಫಲಾನುಭವಿಗಳು ಪಾಲ್ಗೊಂಡರು. ಈ ಸಂದರ್ಭದಲ್ಲಿ ಊಂತನಾಜೆ ಶ್ರೀ ಲಕ್ಷ್ಮಿನಾರಾಯಣ ಭಜನಾ ಮಂಡಳಿಗೆ ಕಸದ ಬುಟ್ಟಿ ಹಸ್ತಾಂತರಿಸಲಾಯಿತು.‌

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.