ಬೆಳ್ತಂಗಡಿ ಮಿನಿ ವಿಧಾನಸೌಧದ ಎದುರು ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ದೇಶವ್ಯಾಪಿ ಪ್ರತಿಭಟನೆ

ದೇಶದಲ್ಲಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು , ಇಡೀ ಜಗತ್ತಿನಲ್ಲೇ ಭಾರತ ಮೂರನೇ ಸ್ಥಾನ ಪಡೆಯುವ ಮೂಲಕ ಭಾರತ ಕೊರೋನಾ ವೈರಸ್ ಹರಡುವಿಕೆಯಲ್ಲಿ ವಿಶ್ವಗುರು ಪಟ್ಟಕ್ಕೆ ಏರಿದೆ ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ವಸಂತ ಆಚಾರಿ ಛೇಡಿಸಿದರು. ಅವರು ಸಿಪಿಐ(ಎಂ) ಪಕ್ಷದ ವತಿಯಿಂದ ಬೆಳ್ತಂಗಡಿ ಮಿನಿ ವಿಧಾನಸೌಧದ ಎದುರು ಆಗಸ್ಟ್ 24 ರಿಂದ 29 ರ ವರೆಗೆ ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ದೇಶವ್ಯಾಪಿ ಪ್ರತಿಭಟನಾ ವಾರಾಚರಣೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಕೊರೋನಾ ವೈರಸ್ ಹಾಗೂ ಲಾಕ್ ಡೌನ್ ನಿಂದ ದೇಶದಾದ್ಯಂತ ಲಕ್ಷಾಂತರ ಜನರು ಸಾವನ್ನಪ್ಪಿದ್ದು , ಈ ಸಾವಿಗೆ ನರೇಂದ್ರ ಮೋದಿ ಸರ್ಕಾರದ ಬೇಜವಾಬ್ದಾರಿ ಕಾರಣ ಎಂದ ಅವರು ದೇಶಕ್ಕೆ ಮೋದಿ‌ ಅಂತಿಮ ಎಂದವರು ಇದೀಗ ದೇಶವನ್ನು ದೇವರು ಕಾಪಾಡಬೇಕು ಹೇಳುವ ಮೂಲಕ ಬಿಜೆಪಿ ದೇಶ ಆಳಲು ಅಯೋಗ್ಯವಾಗಿದೆ ಎಂಬುದನ್ನು ಬಹಿರಂಗ ಪಡಿಸಿದ್ದಾರೆ ಎಂದು ಆರೋಪಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಿಪಿಐ(ಎಂ) ತಾಲೂಕು ಕಾರ್ಯದರ್ಶಿ, ನ್ಯಾಯವಾದಿ ಶಿವಕುಮಾರ್ ಎಸ್. ಎಂ ಕೊರೋನಾ ವೈರಸ್ ತಡೆಗಟ್ಟಲು ವಿಫಲವಾದ ರಾಜ್ಯ, ಕೇಂದ್ರ ಸರ್ಕಾರಗಳು ಸಾರ್ವಜನಿಕ ಸಂಸ್ಥೆಗಳನ್ನು ಬಂಡವಾಳ, ವಿದೇಶಿ ಬಂಡವಾಳಗಾರರಿಗೆ ಮಾರಾಟ ಮಾಡಲಾಗಿದೆ. ಇದು ಕೇಂದ್ರ ಸರ್ಕಾರದ ಆತ್ಮನಿರ್ಭರ ಕಾರ್ಯಕ್ರಮವೇ ಎಂದು ಪ್ರಶ್ನಿಸಿದರು.  ಪ್ರತಿಭಟನೆಯನ್ನು ಉದ್ದೇಶಿಸಿ ಸಿಪಿಐ(ಎಂ) ಬೆಳ್ತಂಗಡಿ ತಾಲೂಕು ಸಮಿತಿ ಸದಸ್ಯರಾದ ವಸಂತ ನಡ , ಶೇಖರ್ ಎಲ್ ಮಾತನಾಡಿದರು.

ಪ್ರತಿಭಟನೆಯ ನೇತೃತ್ವವನ್ನು ಜನವಾದಿ ಮಹಿಳಾ ಸಂಘದ ಸುಕನ್ಯಾ ಹೆಚ್ , ಶ್ವೇತಾ , ಪದ್ಮಾವತಿ ಬೆಳ್ತಂಗಡಿ, ಸುಧಾ ಕೆ ರಾವ್ , ಕರ್ನಾಟಕ ಪ್ರಾಂತ ರೈತ ಸಂಘದ ಸೆಲಿಮೋನ್ ಪುದುವೆಟ್ಟು , ಜಯ ಮೋಹನ್ ಮುಂಡಾಜೆ , ಸಿಐಟಿಯು ನ ಪ್ರಭಾಕರ್ ತೋಟತ್ತಾಡಿ , ಸಂಜೀವ ಆರ್ ಉಜಿರೆ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.