ಪಿಂಚಣಿ ವೇತನವನ್ನು ತಕ್ಷಣವೇ ಬಿಡುಗಡೆಗೊಳಿಸುವಂತೆ ಎಸ್ಡಿಪಿಐ ಬೆಳ್ತಂಗಡಿ ವತಿಯಿಂದ ಪ್ರತಿಭಟನೆ

ಬೆಳ್ತಂಗಡಿ ಸೆ -03 : ಬಾಕಿ ಇರುವ ಪಿಂಚಣಿ ವೇತನವನ್ನು ಸರಕಾರವು ಶೀಘ್ರವೇ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿ ವತಿಯಿಂದ ಬೆಳ್ತಂಗಡಿ ಮಿನಿ ವಿಧಾನ ಸೌದ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಎಸ್ಡಿಪಿಐ ಬೆಳ್ತಂಗಡಿ ವಿಧಾನ ಸಭಾ ಅಧ್ಯಕ್ಷರಾದ ಹೈದರ್ ನೀರ್ಸಾಲ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದು, ಕಾರ್ಯದರ್ಶಿ ನಿಝಾಮ್ ಗೇರುಕಟ್ಟೆ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು.


ಪ್ರತಿಭಟನೆಯಲ್ಲಿ ಪಿಎಫ್ಐ ಜಿಲ್ಲಾಧ್ಯಕ್ಷರಾದ ಮುಸ್ತಫಾ ಜಿ ಕೆ, ಎಸ್ಡಿಪಿಐ ಜಿಲ್ಲಾ ಸಮಿತಿ ಸದಸ್ಯ ಅಕ್ಬರ್ ಬೆಳ್ತಂಗಡಿ, ಎಸ್ಡಿಪಿಐ ಬೆಳ್ತಂಗಡಿ ವಿಧಾನ ಸಭಾ ಉಪಾಧ್ಯಕ್ಷರಾದ ಶುಕೂರ್ ಕುಪ್ಪೆಟ್ಟಿ, ಎಸ್ಡಿಪಿಐ ನಗರ ಸಮಿತಿ ಅಧ್ಯಕ್ಷ ಫೈಝಲ್ ಐ ಜೆ ಇನ್ನಿತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸ್ವಾಲಿ ಮದ್ದಡ್ಕ ಸ್ವಾಗತಿಸಿದರು. ರವೂಫ್ ಪುಂಜಾಲಕಟ್ಟೆ ನಿರೂಪಿಸಿ ಧನ್ಯವಾದಗೈದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.