ಬೆಳ್ತಂಗಡಿ: ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ; 42 ಮಂದಿ ನಿವೃತ್ತ ಶಿಕ್ಷಕರಿಗೆ ಸನ್ಮಾನ

ಬೆಳ್ತಂಗಡಿ: ಶಿಕ್ಷಕರ ದಿನಾಚರಣೆ ಸಮಿತಿ ಬೆಳ್ತಂಗಡಿ, ತಾಲೂಕು ಪಂಚಾಯತ್ ಬೆಳ್ತಂಗಡಿ, ಸಾರ್ವಜನಿಕ ಶಿಕ್ಷಣ ಇಲಾಖೆ ಬೆಳ್ತಂಗಡಿ ಹಾಗೂ ನಗರ ಪಂಚಾಯತ್ ಬೆಳ್ತಂಗಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಡಾ. ಸರ್ವಪಳ್ಳಿ ರಾಧಾಕೃಷ್ಣನ್ ಇವರ ಜನ್ಮದಿನೋತ್ಸವ ಹಾಗೂ ಶಿಕ್ಷಕರ ದಿನಾಚರಣೆ ಸೆ. 5 ರಂದು ಶ್ರೀ.ಧ.ಮಂ.ಸ್ವಾಮಿ ಕಲಾಭವನದಲ್ಲಿ ಜರುಗಿತು.

ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜ ದೀಪ ಬೆಳಗಿಸಿ ಉದ್ಘಾಟಿಸಿದರು. ಸಮಾರಂಭದಲ್ಲಿ ಪ್ರಾಥಮಿಕ ಮತ್ತು ಫ್ರೌಡ ಶಾಲಾ ಒಟ್ಟು 42 ಮಂದಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು. ಅಲ್ಲದೆ 2019-20 ನೇ ಸಾಲಿನಲ್ಲಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರನ್ನು ಗೌರವಿಸಲಾಯಿತು.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕರುಗಳಾದ ಹರೀಶ್ ಕುಮಾರ್, ಪ್ರತಾಪಸಿಂಹ ನಾಯಕ್, ತಾ.ಪಂ ಅಧ್ಯಕ್ಷೆ ದಿವ್ಯಜ್ಯೋತಿ, ಜಿ.ಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಮಮತಾ ಎಂ ಶೆಟ್ಟಿ, ಜಿ.ಪಂ‌ ಸದಸ್ಯೆ ಸೌಮ್ಯಲತಾ, ಜಯಂತ ಗೌಡ, ತಾ.ಪಂ ಉಪಾಧ್ಯಕ್ಷೆ ವೇದಾವತಿ, ತಾ.ಪಂ‌ ಸ್ಥಾಯಿ ಸಮಿತಿ ಅಧ್ಯಕ್ಷ ಶಶಿಧರ ಕಲ್ಮಂಜ ಮೊದಲಾದವರು ಉಪಸ್ಥಿತರಿದ್ದರು.

ಶ್ರೀಮತಿ ಮೇಧಾ ಮತ್ತು ಅನಸೂಯ ಪಾಟಿಕ್ ಇವರ ಪ್ರಾರ್ಥನೆ ನಂತರ ತಾ.ಪಂ ಕಾರ್ಯನಿರ್ವಾಹಣಾಧಿಕಾರಿ ಕುಸುಮಾಧರ್ ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ರಮೇಶ್ ಮಯ್ಯ ಸಂದೇಶ ವಾಟಿಸಿದರು. ರಾಜೇಶ್ ಮತ್ತು ರಮೇಶ್ ಹಾಗೂ ಸುಭಾಶ್ ಜಾದವ್ ಸನ್ಮಾನಿತರ ವಿವರ ನೀಡಿದರು. ಅಜಿತ್ ಕುಮಾರ್ ಕೊಕ್ರಾಡಿ ಕಾರ್ಯಕ್ರಮ ನಿರೂಪಿಸಿ, ಭುವನೇಶ್ ಜಿ ಧನ್ಯವಾದವಿತ್ತರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.