HomePage_Banner_
HomePage_Banner_

ಸೆಪ್ಟೆಂಬರ್​​​ 21ರಿಂದ ಶಾಲೆ​​ ಭಾಗಶಃ ಪುನಾರಂಭಕ್ಕೆ ಕೇಂದ್ರದಿಂದ ಮಾರ್ಗಸೂಚಿ ರಿಲೀಸ್​!

ಸೆಪ್ಟೆಂಬರ್​​​ 21ರಿಂದ 9ನೇ ತರಗತಿಯಿಂದ 12ನೇ ತರಗತಿವರೆಗೆ ಭಾಗಶಃ ಶಾಲೆಗಳನ್ನ ಪುನಾರಂಭ ಮಾಡಲು ಇದೀಗ ಕೇಂದ್ರ ಆರೋಗ್ಯ ಇಲಾಖೆ ಮಾರ್ಗಸೂಚಿ ಹೊರಡಿಸಿದೆ.

ನವದೆಹಲಿ: ದೇಶಾದ್ಯಂತ ಸೆಪ್ಟೆಂಬರ್​ 1ರಿಂದ ಅನ್​ಲಾಕ್​ 4.0 ನಿಯಮ ಜಾರಿಗೊಂಡಿದ್ದು, ಸಾರ್ವಜನಿಕರ ಅನುಕೂಲಕ್ಕಾಗಿ ಮೆಟ್ರೋ ಸೇವೆ ಸೇರಿದಂತೆ ಅನೇಕ ಸಡಲಿಕೆ ನೀಡಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ. ಇದೀಗ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿರುವ ಕೇಂದ್ರ ಸರ್ಕಾರ ಶಾಲೆಗಳನ್ನ ಭಾಗಶಃ ಪುನಾರಂಭಿಸಲು ಅನುಮತಿ ನೀಡಿದೆ.
ಸೆಪ್ಟೆಂಬರ್​​​ 21ರಿಂದ ದೇಶಾದ್ಯಂತ 9ರಿಂದ 12ನೇ ತರಗತಿವರೆಗೆ ಸ್ವಯಂ ಪ್ರೇರಿತವಾಗಿ ಶಾಲೆ ಆರಂಭಿಸಲು ಕೇಂದ್ರ ಆರೋಗ್ಯ ಸಚಿವಾಲಯ ಮಾರ್ಗಸೂಚಿ ಹೊರಡಿಸಿದ್ದು, ಈ ವೇಳೆ ವಿದ್ಯಾರ್ಥಿಗಳು ತಮ್ಮ ಶಿಕ್ಷಕರಿಂದ ಮಾರ್ಗದರ್ಶನ ಪಡೆದುಕೊಳ್ಳಲು ಅನುಮತಿ ನೀಡಲಾಗಿದೆ.ಶಾಲೆಗೆ ಬರುವ ವಿದ್ಯಾರ್ಥಿಳು, ಶಿಕ್ಷಕರು, ಉದ್ಯೋಗಿಗಳು ಕೊರೊನಾ ಮಾರ್ಗಸೂಚಿ ಪಾಲನೆ ಮಾಡುವುದು ಕಡ್ಡಾಯವಾಗಿದೆ. ಶಾಲೆಗೆ ಬರುವ ವಿದ್ಯಾರ್ಥಿಗಳ ಪೋಷಕರಿಂದ ಲಿಖಿತ ಒಪ್ಪಿಗೆ ಪಡೆದುಕೊಳ್ಳಬೇಕಾಗಿದೆ.ಇದಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್​, ಸರ್ಕಾರ ಇದೀಗ ಹಂತ ಹಂತವಾಗಿ ಅನ್​ಲಾಕ್​​ ಪ್ರಕ್ರಿಯೆ ಆರಂಭಿಸಿದ್ದು, ಇದೀಗ ಶಾಲಾ-ಕಾಲೇಜ್​ ಆರಂಭ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದರು. ಶಾಲೆಗೆ ತೆರಳುವ ವಿದ್ಯಾರ್ಥಿಗಳು ಮಾಸ್ಕ್ ಧರಿಸುವುದು ಕಡ್ಡಾಯವಾಗಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಾಗಿದೆ. ಮೇಲಿಂದ ಮೇಲೆ ಕೈ ತೊಳೆದುಕೊಳ್ಳುವುದು ಹಾಗೂ ಎಲ್ಲೆಂದರಲ್ಲಿ ಉಗುಳುವುದು ನಿಷೇಧ ಎಂದು ತಿಳಿಸಿದೆ.ಕಂಟೈನ್ಮೆಂಟ್​​​ ಪ್ರದೇಶ ಹೊರತು ಪಡಿಸಿ ಶಾಲಾ-ಕಾಲೇಜ್​ ಓಪನ್​ ಆಗಲಿದ್ದು, ಉಳಿದಂತೆ ಕಂಟೈನ್ಮೆಂಟ್​​ ಪ್ರದೇಶಗಳಲ್ಲಿ ಈ ಚಟುವಟಿಕೆಗೆ ಅವಕಾಶವಿಲ್ಲ ಎಂದು ತಿಳಿಸಿದೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.