HomePage_Banner_
HomePage_Banner_

ನ.15ರೊಳಗೆ ಸಹಕಾರ ಸಂಘಗಳ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸಲು ಸೂಚನೆ

ಕರ್ನಾಟಕ ರಾಜ್ಯದ ಪ್ರಾಥಮಿಕ, ಮಾಧ್ಯಮಿಕ, ಫೆಡರಲ್ ಸಹಕಾರ ಸಂಘಗಳ ಚುನಾವಣೆ ಪ್ರಕ್ರಿಯೆಯನ್ನು ನವೆಂಬರ್ 15ರೊಳಗೆ ಪೂರ್ಣಗೊಳಿಸಬೇಕು ಎಂದು ಸಹಕಾರ ಸಂಘಗಳ ಚುನಾವಣಾ ಪ್ರಾಧಿಕಾರದ ಆಯುಕ್ತರು ಸೂಚನೆ ನೀಡಿದ್ದಾರೆ.
ಸಹಕಾರ ಸಂಘಗಳ ಚುನಾವಣಾ ಪ್ರಾಧಿಕಾರದ ಆಯುಕ್ತ ಡಾ.ಎನ್.ಎಸ್.ಚನ್ನಪ್ಪಗೌಡ ರಾಜ್ಯದ ಪ್ರಾಥಮಿಕ, ಮಾಧ್ಯಮಿಕ ಹಾಗೂ ಫೆಡರಲ್ ಸಹಕಾರ ಸಂಘಗಳ ಚುನಾವಣಾಧಿಕಾರಿಗಳಿಗೆ ಈ ಕುರಿತು ಪತ್ರ ಬರೆದು ಸೂಚನೆ ರವಾನಿಸಿದ್ದಾರೆ. ಕರ್ನಾಟಕ ಹೈಕೋರ್ಟ್ ಚುನಾವಣೆಗಳನ್ನು ಕೂಡಲೇ ನಡೆಸಲು ಸಹಕಾರ ಚುನಾವಣಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದೆ. ಸಹಕಾರ ಸಂಘಗಳ ಅಧಿಕಾರದ ಅವಧಿ ಪೂರ್ಣಗೊಂಡಲ್ಲಿ ಚುನಾವಣಾ ಪ್ರಕ್ರಿಯೆಗಳನ್ನು ಮರು ಆರಂಭಿಸಬೇಕು. ನವೆಂಬರ್ 15ರೊಳಗೆ ಚುನಾವಣೆ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕು ಎಂದು ಸೂಚಿಸಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.