HomePage_Banner_
HomePage_Banner_

ಕಡಿರುದ್ಯಾವರ, ಮಲವಂತಿಗೆ, ಮಿತ್ತಬಾಗಿಲು ಇಂದಬೆಟ್ಟು,ನಾವೂರು ಗ್ರಾ.ಪಂ ವ್ಯಾಪ್ತಿಯಲ್ಲಿ ರೂ. 4.05 ಕೋಟಿ ವೆಚ್ಚದ ರಸ್ತೆ ಕಾಮಗಾರಿಗಳಿಗೆ ಶಿಲಾನ್ಯಾಸ

ಬೆಳ್ತಂಗಡಿ: ಗ್ರಾಮೀಣ ಪ್ರದೇಶವಾದ ಕಡಿರುದ್ಯಾವರ, ಮಲವಂತಿಗೆ, ಮಿತ್ತಬಾಗಿಲು, ಇಂದಬೆಟ್ಟು, ನಾವೂರು ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ಸುಮಾರು 4.05 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ರಸ್ತೆ ಕಾಮಗಾರಿಗಳಿಗೆ ಶಾಸಕ ಹರೀಶ್ ಪೂಂಜ ಅವರು ಸೆ.12ರಂದು ಶಿಲಾನ್ಯಾಸ ನೆರವೇರಿಸಿದರು.
ಕಡಿರುದ್ಯಾವರ ಗ್ರಾ.ಪಂ ವ್ಯಾಪ್ತಿಯಲ್ಲಿ ರೂ.1.20 ಕೋಟಿ, ಮಲವಂತಿಗೆ ಗ್ರಾ.ಪಂ ವ್ಯಾಪ್ತಿಯಲ್ಲಿ ರೂ.45 ಲಕ್ಷ, ಮಿತ್ತಬಾಗಿಲು ಗ್ರಾ.ಪಂ ವ್ಯಾಪ್ತಿಯಲ್ಲಿ ರೂ.1.05 ಕೋಟಿ, ಇಂದಬೆಟ್ಟು ಗ್ರಾ.ಪಂ ವ್ಯಾಪ್ತಿಯಲ್ಲಿ 65 ಲಕ್ಷ ಹಾಗೂ ನಾವೂರು ಗ್ರಾ.ಪಂ ವ್ಯಾಪ್ತಿಯಲ್ಲಿ ರೂ.70 ಲಕ್ಷ ರಸ್ತೆ ಕಾಮಗಾರಿಗಳಿಗೆ ಶಿಲ್ಯಾಸವನ್ನು ಮಾಡಲಾಯಿತು.
ಈ ಸಂದರ್ಭದಲ್ಲಿ ಜನಪ್ರತಿನಿಧಿಗಳು, ಸಂಘ-ಸಂಸ್ಥೆಯವರು, ಗಣ್ಯರು, ಊರಿನ ನಾಗರಿಕರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.