ಉಜಿರೆ: ಉದ್ಯೋಗ ನೈಪುಣ್ಯ ತರಬೇತಿ ಶಿಬಿರ ಉದ್ಘಾಟನೆ

ಬೆಳ್ತಂಗಡಿ, ಸೆ.14: ಭಾರತ ಆರ್ಥಿಕ ಸ್ಥಿತಿ ಉನ್ನತ ಮಟ್ಟಕ್ಕೇರುವಲ್ಲಿ ಸ್ವದೇಶಿ ಚಿಂತನೆ ಜಾಗೃತಗೊಳ್ಳಬೇಕಿದೆ. ಈ ದಿಸೆಯಲ್ಲಿ ಅತೀ ಹೆಚ್ಚು ಯುವಸಮುದಾಯವನ್ನು ಹೊಂದಿರುವ ನಮ್ಮದೇಶದಲ್ಲಿ ಯುವಕರಿಗೆ ಹೆಚ್ಚು ಹೆಚ್ಚು ಆಸಕ್ತಿದಾಯಕ ಮೌಲ್ಯಗಳನ್ನು ಹುಟ್ಟುಹಾಕುವ ನೈಪುಣ್ಯ ಶಿಬಿರಗಳ ಅವಶ್ಯಕತೆ ಇದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಪ್ರಭಾಕರ ಭಟ್ ಹೇಳಿದರು.

ಗ್ರಾಮವಿಕಾಸ ಸಮಿತಿ ಮಂಗಳೂರು, ಸಹಕಾರ ಭಾರತಿ ದ.ಕ. ಜಿಲ್ಲೆ, ವಿವೇಕಾನಂದ ವಿದ್ಯಾವರ್ಧಕ ಸಂಘ, ಪುತ್ತೂರು ಆಶ್ರಯದಲ್ಲಿ ವಿವೇಕಾನಂದ ಪಾಲಿಟೆಕ್ನಿಕ್ ಪುತ್ತೂರು ಸಹಕಾರದಲ್ಲಿ ಉಜಿರೆ ಶಾರದಾ ಮಂಟಪದಲ್ಲಿ ನಡೆಯಲಿರುವ ಉದ್ಯೋಗ ನೈಪುಣ್ಯ ತರಬೇತಿ ಶಿಬಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಸ್ವದೇಶಿ ಕಲ್ಪನೆಯ ಜತೆಗೆ ಮಾರುಕಟ್ಟೆ ವಿಸ್ತರಣೆಯ ಕೌಶಲ್ಯವನ್ನು ಬೆಳೆಸಿಕೊಂಡಲ್ಲಿ ಸ್ಥಳೀಯ ವಸ್ತುಗಳು ಜಾಗತಿಕ ಮಟ್ಟದಲ್ಲಿ ಬೆಳೆಯಲು ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಯುವ ಸಮುದಾಯಕ್ಕೆ ನೈಪುಣ್ಯ ತರಬೇತಿ‌ ನೀಡಿದಲ್ಲಿ ಗ್ರಾಮ ಶಶಕ್ತೀಕರಣಗೊಳ್ಳಲಿದೆ ಎಂದು ಅಭಿಪ್ರಾಯಪಟ್ಟರು.

ಸಹಕಾರ ಭಾರತಿ ಜಿಲ್ಲಾಧ್ಯಕ್ಷ ಕೃಷ್ಣಪ್ರಸಾದ್ ಮಡ್ತಿಲ, ವಿವೇಕಾನಂದ ಪಾಲಿಟೆಕ್ನಿಕ್ ಅಧ್ಯಕ್ಷ ಪ್ರಸನ್ನ ಭಟ್ ಶುಭಹಾರೈಸಿದರು. ಗ್ರಾಮವಿಕಾಸ ವಿಭಾಗ ಸಂಯೋಜಕ ವೆಂಕಟ್ರಮಣ ಹೊಳ್ಳ, ಪ್ರಮುಖರಾದ  ಸುಭಾಶ್ ಕಳೆಂಜ, ಲಕ್ಣ್ಮಣ ದಾಸ್, ದಿನೇಶ ಬೊಳ್ಮಲೆ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.