ರೈತರನ್ನು ಜೀತಕ್ಕೆ ತಳ್ಳುವ ಬಿಜೆಪಿ ಸರಕಾರದ ನೀತಿ ಅತ್ಯಂತ ಅಪಾಯಕಾರಿ: ಎಸ್ಡಿಪಿಐ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ರೈತರ ಸಮಸ್ಯೆಗಳನ್ನು ಪರಿಹರಿಸುವ ಬದಲಿಗೆ ಇನ್ನಷ್ಟು ಬಡತನಕ್ಕೆ ತಳ್ಳುವ ಹಾಗೂ ಕೃಷಿ ಭೂಮಿಯನ್ನು ಬಂಡವಾಳಶಾಹಿಗಳು ಖರೀದಿಸಲು ಅನುವು ಮಾಡಿಕೊಡುವ ಕೇಂದ್ರ ಹಾಗೂ ರಾಜ್ಯ ಸರಕಾರದ ನೀತಿಯನ್ನು ಎಸ್ಡಿಪಿಐ ಬೆಳ್ತಂಗಡಿ ವಿಧಾನ ಸಭಾ ಸಮಿತಿ ಖಂಡಿಸುತ್ತದೆ ಎಂದು ಎಸ್ಡಿಪಿಐ ವಿಧಾನ ಸಭಾ ಅಧ್ಯಕ್ಷ ಹೈದರ್ ನೀರ್‌ಸಾಲ್ ಹೇಳಿದರು.


ಅವರು ಸೆ.25ರಂದು ಬೆಳ್ತಂಗಡಿ ಜಮ್ಯೀಯತುಲ್‌ಫಲಾಹ್ ಸಭಾಂಗಣದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರಕಾರಗಳು ಕೃಷಿ ಕ್ಷೇತ್ರವನ್ನು ಕಾರ್ಪೋರೇಟೀಕರಣ ಮಾಡಲು ಹೊರಟಿದ್ದು, ರೈತರನ್ನು ಜೀತದಾಳುಗಳಾಗಿ ಮಾಡಲು ಪಣತೊಟ್ಟಿದೆ. ಗ್ರಾಮೀಣ ಪ್ರದೇಶಗಳ ಜನರು ಹಾಗೂ ರೈತರ ಬದುಕಿನ ಜೊತೆಗೆ ಚೆಲ್ಲಾಟವಾಡುವ ಬಿಜೆಪಿ ಸರಕಾರಗಳ ದುರ್ನೀತಿಯ ವಿರುದ್ಧ ಸಂಘಟಿತ ಹೋರಾಟ ನಡೆಸುವುದಾಗಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಎಸ್ಡಿಪಿಐ ಜಿಲ್ಲಾ ಉಪಾಧ್ಯಕ್ಷ ಅಂತೋಣಿ ಪಿ.ಡಿ, ಬೆಳ್ತಂಗಡಿ ವಿಧಾನ ಸಭಾ ಪ್ರ. ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ, ಕೋಶಾಧಿಕಾರಿ ಫಝಲ್ ರಹಮಾನ್ ಕೋಯ, ಕಾಂiiದರ್ಶಿ ಆಶ್ರಫ್‌ಕಟ್ಟೆ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.