ಉಜಿರೆ ಅಮರ್ ಡ್ರಗ್ ಹೌಸ್ ಮಾಲಕ ಕೇಶವ ಭಟ್ ನಿಧನ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಹಿರಿಯ ಜೌಷಧ ಮಾರಾಟಗಾರರೂ, ಬೆಳ್ತಂಗಡಿ ತಾಲೂಕು ಜೌಷಧ ವ್ಯಾಪಾರಸ್ಥರ ಸಂಘದ ಗೌರವಾಧ್ಯಕ್ಷರೂ ಆಗಿದ್ದ, ಉಜಿರೆ ಅಮರ್ ಡ್ರಗ್ ಹೌಸ್ನ ಮಾಲಕ ಕೆ.ಕೇಶವ ಭಟ್(66ವ) ಅವರು ಅಲ್ಪಕಾಲದ ಅಸೌಖ್ಯದಿಂದ ಬಳಲಿ ಸೆ.26ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಉಜಿರೆಯಲ್ಲಿ ಸುಮಾರು 40 ವರ್ಷಗಳಿಂದ ಅಮರ್‍ಡ್ರಗ್ ಹೌಸ್ ಎಂಬ ಜೌಷಧ ಮಾರಾಟ ಅಂಗಡಿಯನ್ನು ನಡೆಸಿಕೊಂಡು ಬರುತ್ತಿದ್ದ ಕೇಶವ ಭಟ್ ಅವರು ಕೊಡುಗೈದಾನಿಯಾಗಿ, ಪರೋಪಕಾರಿಯಾಗಿ, ಎಲ್ಲರ ಪ್ರೀತಿ, ವಿಶ್ವಾಸಕ್ಕೆ ಪಾತ್ರರಾಗಿದ್ದರು. ಉಜಿರೆ ಪರಿಸರದಲ್ಲಿ ನಡೆಯುವ ಯಾವುದೇ ಕಾರ್ಯಕ್ರಮದ ಆಮಂತ್ರಣ ತಂದವರನ್ನು ಅವರು ಬರಿಗೈಯಲ್ಲಿ ಕಳುಹಿಸಿದವರಲ್ಲಿ ಪ್ರತಿಯೊಂದು ಕಾರ್ಯಕ್ರಮಕ್ಕೂ ಸಹಕಾರ ನೀಡಿ, ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದರು.
ಬೆಳ್ತಂಗಡಿ ತಾಲೂಕಿನಲ್ಲಿ ಜೌಷಧ ವ್ಯಾಪಾರಸ್ಥರ ಸಂಘವನ್ನು ಅವರ ಮನೆಯಲ್ಲಿ ಪ್ರಥಮ ಸಭೆ ನಡೆಸಿ, ಪ್ರಾರಂಭಿಸಲಾಗಿತ್ತು. ಇಲ್ಲಿಯ ತನಕ ಅವರು ಇದರ ಗೌರವಾಧ್ಯಕ್ಷರಾಗಿ ಮಾರ್ಗದರ್ಶನ ಮಾಡುತ್ತಿದ್ದರು. ಮೃತರು ಪತ್ನಿ ಶ್ರೀಮತಿ ರತ್ನ, ಪುತ್ರ ಪ್ರದೀಪ್ ಹಾಗೂ ಬಂಧು ವರ್ಗದವರನ್ನು ಅಗಲಿದಾರೆ. ಮೃತರ ಗೌರವಾರ್ಥ ಬೆಳ್ತಂಗಡಿ ತಾಲೂಕಿನ ಎಲ್ಲಾ ಜೌಷಧ ವ್ಯಾಪರಸ್ಥರು ತಮ್ಮ ಅಂಗಡಿಗಳನ್ನು ಬಂದ್ ಮಾಡಿ ಸಂತಾಪ ಸೂಚಿಸಿದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.