ವೃತ್ತಿ ತರಭೇತಿ ಮತ್ತು ಸವಲತ್ತುಗಳ ಮಾಹಿತಿ ಕಾರ್ಯಗಾರ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಅನುಗ್ರಹ ಟ್ರೈನಿಂಗ್ ಕಾಲೇಜು ಬೆಳ್ತಂಗಡಿ ಇದರ ವತಿಯಿಂದ ವಿದ್ಯಾರ್ಥಿಗಳಿಗೆ ವೃತ್ತಿ ತರಬೇತಿ ಮತ್ತು ಸರಕಾರಿ ಸವಲತ್ತುಗಳ ಮಾಹಿತಿ ಕಾರ್ಯಾಗಾರ ಇತ್ತೀಚೆಗೆ ಅನುಗ್ರಹ ಕಾನ್ಫರೆನ್ಸ್ ಹಾಲ್‌ನಲ್ಲಿ ನಡೆಯಿತು. ಅನುಗ್ರಹ ಕಾಲೇಜಿನ ನೂತನ ಪ್ರಾಂಶುಪಾಲ ಮಾಜಿ ಸೈನಿಕ ಮುಹಮ್ಮದ್ ರಫೀ ಅಧ್ಯಕ್ಷತೆ ವಹಿಸಿದ್ದರು.
ಇನ್ಫೋಮೇಟ್ ಫೌಂಡೇಶನ್ ನಿರ್ದೇಶಕ ಮತ್ತು ತರಬೇತುದಾರ ಅಬ್ದುಲ್ ಖಾದರ್ ನಾವೂರು ಮುಖ್ಯ ಅತಿಥಿಗಳಾಗಿ ಆಗಮಿಸಿ ವಿದ್ಯಾರ್ಥಿಗಳ ವಿದ್ಯಾರ್ಹತೆಗೆ ತಕ್ಕಂತೆ ಸಿಗಬಹುದಾದ ಸರಕಾರಿ ಮತ್ತು ಖಾಸಗಿ ಉದ್ಯೋಗಾವಕಾಶಗಳ ಬಗ್ಗೆ ಹಾಗೂ ವಿವಿಧ ಇಲಾಖೆಗಳಿಂದ ಸಿಗುವ ಸ್ಕಾಲರ್ಶಿಪ್ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಕೊನೆಯಲ್ಲಿ ಸಂಸ್ಥೆಯ ಪ್ರಾಂಶುಪಾಲ ಮುಹಮ್ಮದ್ ರಫಿಯವರು ತರಬೇತುದಾರ ಅಬ್ದುಲ್ ಖಾದರ್ ರವರಿಗೆ ಸ್ಮರಣಿಕೆ ನೀಡಿ ಗೌರವಿಸಿದರು. ಅನುಗ್ರಹ ಸಂಸ್ಥೆಯ ಕಾರ್ಯಕ್ರಮ ಸಂಯೋಜಕ ಇರ್ಷಾದ್ ಧನ್ಯವಾದ ಗೈದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.