ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನವೀಕೃತಗೊಂಡ ಸಂಘದ ಪ್ರಧಾನ ಕಚೇರಿ ಉದ್ಘಾಟನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

 

ಬೆಳ್ತಂಗಡಿ: ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಬೆಳ್ತಂಗಡಿ ಇದರ ನವೀಕೃತಗೊಂಡ ಸಂಘದ ಪ್ರಧಾನ ಕಚೇರಿಯ ಉದ್ಘಾಟನಾ ಸಮಾರಂಭ ಹಾಗೂ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮವು ಇಂದು( ಒ.1) ಬೆಳ್ತಂಗಡಿಯ ಸಿ.ಎಸ್ ಕಾಂಪ್ಲೆಕ್ಸ್‌ನಲ್ಲಿ ಜರುಗಿತು.
ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಕಾಯಕ್ರ,ಮದ ಉದ್ಘಾಟನೆಯನ್ನು ನೆರವೇರಿಸಿದರು. ಬೆಳ್ತಂಗಡಿ ಹೋಲಿ ರೆಡೀಮರ್ ಚರ್ಚ್ ಧರ್ಮಗುರು ವಂ. ಜೋಸೆಫ್ ಆಲ್ಪೋನ್ಸ್ ಕಾರ್ಡೋಜಾ ಆಶೀರ್ವಚನ ನೀಡಿದರು. ಬೆಳ್ತಂಗಡಿ ಕೆಥೋಲಿಕ್ ಕ್ರೆಡಿಟ್ ಸಹಕಾರ ಸಂಘದ ಅಧ್ಯಕ್ಷ ಎಲೋಸಿಯಸ್ ಎಸ್ ಲೋಬೋ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಪ್ರತಾಪ್ ಸಿಂಹ ನಾಯಕ್ ರನ್ನು ಸನ್ಮಾನಿಸಲಾಯಿತು


ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಕೆಥೋಲಿಕ್ ಕ್ರೆಡಿಟ್ ಸಹಕಾರ ಸಂಘದ ಹಿರಿಯ ಸಹಕಾರಿ ಅತ್ತುಸ್ ವೇಗಸ್ ಉಪಸ್ಥಿತರಿದ್ದರು. ಸಂಘದ ಉಪಾಧ್ಯಕ್ಷ ಜೋನ್ ಅರ್ವಿನ್ ಡಿಸೋಜಾ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಐವನ್ ಗೊನ್ಸಾಲ್ವಿಸ್, ಹಾಗೂ ಸಂಘದ ನಿರ್ದೇಶಕರು, ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ 2019-20ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಬೆಳ್ತಂಗಡಿ ತಾಲೂಕಿಗೆ ದ್ವಿತೀಯ ಸ್ಥಾನ ಪಡೆದ ಲಾಯಿಲ ಸೈಂಟ್ ಮೇರೀಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಸುಶ್ಮಿತಾ ರೆಚೆಲ್ ವೇಗಸ್ ರವರನ್ನು ಸನ್ಮಾನಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.