ಗಾಂಧಿಜಯಂತಿ ಪ್ರಯುಕ್ತ ಜನಜಾಗೃತಿ ಪದಾಧಿಕಾರಿಗಳ ಸಹಮಿಲನ ಮತ್ತು ಗಾಂಧಿ ಸ್ಮರಣೆ ಕಾರ್ಯಕ್ರಮ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ/ಗುರುವಾಯನಕೆರೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ತಾಲೂಕು ಇದರ ಆಶ್ರಯದಲ್ಲಿ ಬೆಳ್ತಂಗಡಿ ಶ್ರೀ ಧ.ಮಂ ಸಭಾಂಗಣದಲ್ಲಿ ಗಾಂಧಿಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ ಜನಜಾಗೃತಿ ಪದಾಧಿಕಾರಿಗಳ ಸಹಮಿಲನ ಮತ್ತು ಗಾಂಧಿ ಸ್ಮರಣೆ ಕಾರ್ಯಕ್ರಮ ಇಂದು (ಒ.2)ಬೆಳ್ತಂಗಡಿ ಶ್ರೀ ಧ.ಮಂ ಸಭಾಂಗಣದಲ್ಲಿ ಜರುಗಿತು

ಕಾರ್ಯಕ್ರಮವನ್ನು ವಿಧಾನ ಪರಿಷತ್ ಶಾಸಕ ಹಾಗೂ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಪ್ರತಾಪ್ ಸಿಂಹ ನಾಯಕ್ ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷೆ ಶಾರದಾ ಆರ್. ರೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.


ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್  ವಿನ್ಸೆಂಟ್ ಪಾಯಿಸ್, ನಿಕಟಪೂರ್ವ ಅಧ್ಯಕ್ಷರುಗಳಾದ ಕಿಶೋರ್ ಹೆಗ್ಡೆ, ಬೆಳಾಲು ತಿಮ್ಮಪ್ಪ ಗೌಡ, ಡಿ.ಎ ರಹಿಮಾನ್, ಪ್ರಗತಿಬಂಧು ಕೇಂದ್ರ ಸಮಿತಿ ಅಧ್ಯಕ್ಷ ಪ್ರಭಾಕರ ಪೊಸಂದೋಡಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತ್ತು ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ ಎಲ್ ಹೆಚ್ ಮಂಜುನಾಥ್ ರವರ ಸಂದೇಶವನ್ನು ಬಿತ್ತರಿಸಲಾಯಿತು. ನವಜೀವನ ಸಮಿತಿ ಸದಸ್ಯರಾದ ಉಮೇಶ್ ಗೌಡ ತಣ್ಣೀರುಪಂಥ ಮತ್ತು ರಾಘವೇಂದ್ರ ದಿಡುಪೆ ಇವರು ಅನಿಸಿಕೆ ವ್ಯಕ್ತಪಡಿಸಿದರು. ಕು.ಚಿತ್ತಾರ ಪ್ರಾರ್ಥಿಸಿ, ತಾಲೂಕು ಯೋಜನಾಧಿಕಾರಿ ಜಯಕರ ಶೆಟ್ಟಿ ಸ್ವಾಗತಿಸಿ, ಬೆಳ್ತಂಗಡಿ ವಲಯ ಮೇಲ್ವಿಚಾರಕ ರಾಜೇಶ್ ಧನ್ಯವಾದವಿತ್ತರು. ಗುರುವಾಯನಕೆರೆ ವಲಯ ಯೋಜನಾಧಿಕಾರಿ ಯಶವಂತ್ ಕಾರ್ಯಕ್ರಮ ನಿರೂಪಿಸಿದರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.