ಉಜಿರೆಯಲ್ಲಿ ಸ್ವಚ್ಛೋತ್ಸವ-ನಿತ್ಯೋತ್ಸವ ಮಾಸಾಚರಣೆ ಕಾರ್ಯಕ್ರಮ ಉದ್ಘಾಟನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಗ್ರಾಮಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಬೆಳ್ತಂಗಡಿ ತಾಲೂಕು ಪಂಚಾಯತ್, ಉಜಿರೆ ಗ್ರಾಮ ಪಂಚಾಯತ್ ಹಾಗೂ ಸ್ವಚ್ಛ ಭಾರತ್ ಮಿಷನ್ ಇವುಗಳ ಆಶ್ರಯದಲ್ಲಿ, ಉಜಿರೆ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ಸ್ವಚ್ಛೋತ್ಸವ-ನಿತ್ಯೋತ್ಸವ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ಉಜಿರೆ ಜನಾರ್ಧನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೋಕ್ತೇಸರ ಶರತ್‌ಕೃಷ್ಣ ಪಡ್ವೆಟ್ನಾಯ ಗಾಂಧೀಜಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿದರು.


ಅಕ್ಟೋಬರ್ ೨ರಿಂದ ಅಕ್ಟೋಬರ್ ೩೧ರ ವರೆಗೆ ನಡೆಯುವ ಸ್ವಚ್ಛೋತ್ಸವ-ನಿತ್ಯೋತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಪೌರ ಕಾರ್ಮಿಕರಿಗೆ ಸನ್ಮಾನ, ಉಜಿರೆ ಗ್ರಾಮ ಪಂಚಾಯತ್ ಗೆ ಬದುಕು ಕಟ್ಟೋಣ ಬನ್ನಿ ತಂಡದಿಂದ ಕಳೆ ತೆಗಿಯುವ ಯಂತ್ರ, ಬಟ್ಟೆ ಚೀಲ ವಿತರಣೆ ಹಾಗೂ ಸ್ವಚ್ಛತೆಯ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಪ್ರತಿಜ್ಞಾ ವಿಧಿಯನ್ನು ಎನ್.ಆರ್ ಎಲ್.ಎಮ್ ತಾಲೂಕು ಸಂಯೋಜಕರು ಜಯಾನಂದ್ ಬೋಧಿಸಿದರು.


ಈ ಸಂದರ್ಭ ವೇದಿಕೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾ ಅಧಿಕಾರಿ ಕುಸುಮಾಧರ್, ಆಡಳಿತಾಧಿಕಾರಿ ಡಾ ಯತೀಶ್ ಎಮ್.ಎಸ್, ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಶ್ರೀಧರ ಪೂಜಾರಿ, ಉಜಿರೆ ಪಂಚಾಯತ್‌ನ ಪಿ.ಡಿ.ಒ. ಪ್ರಕಾಶ್ ಶೆಟ್ಟಿ, ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ಪ್ರಾಧ್ಯಾಪಕಿ ಶ್ರುತಿ ಜೈನ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಉದ್ಯಮಿಗಳಾದ ಸಂಧ್ಯಾ ಟ್ರೇಡರ್‍ಸ್‌ನ ರಾಜೇಶ್ ಪೈ ಹಾಗೂ ಲಕ್ಷ್ಮೀ ಗ್ರೂಪ್ಸ್‌ನ ಮೋಹನ್ ಕುಮಾರ್, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ, ಎಮ್.ಜಿ.ಎನ್.ಆರ್,ಇ,ಜಿ,ಎಯ ಐ.ಇ.ಸಿ ಸಂಯೋಜಕರಾದ ಸುನಿತಾ, ವರ್ತಕರ ಸಂಘದ ಅಧ್ಯಕ್ಷ ಅರವಿಂದ ಕಾರಂತ್, ಬೆನಕ ಆಸ್ಪತ್ರೆಯ ಎಸ್.ಜಿ. ಭಟ್, ಮತ್ತಿತರರು ಹಾಗೂ ಊರವರು ಭಾಗವಹಿಸಿದ್ದರು.

 

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.