ಧರ್ಮಸ್ಥಳದಲ್ಲಿ ಸ್ವಚ್ಛೋತ್ಸವ-ನಿತ್ಯೋತ್ಸವ ಮಾಸಾಚರಣೆ ಕಾರ್ಯಕ್ರಮ ಉದ್ಘಾಟನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಧರ್ಮಸ್ಥಳ ಗ್ರಾಮ ಪಂಚಾಯಿತಿನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತ್ಯೋತ್ಸವದಂದು “ಸ್ವಚ್ಚೋತ್ಸವ – ನಿತ್ಯೋತ್ಸವ” ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಹಾಗೂ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾಂಜಲಿಯನ್ನು ಅರ್ಪಿಸುವ ಮೂಲಕ ಆಚರಿಸಲಾಯಿತು.
ಧರ್ಮಸ್ಥಳ ಗ್ರಾಮದ ಅಶೋಕನಗರ ಪರಿಶಿಷ್ಟ ಜಾತಿ ಕಾಲೋನಿಯ ಶ್ರೀಮತಿ ವೀರಮ್ಮ ಎಂಬವರ ಮನೆಯಲ್ಲಿ ಮತ್ತು ಪಿಜತಡ್ಕ ಗಂಗಾಧರ ಮನಿಯನಿ, ಹಾಗೂ ವಿಶ್ವನಾಥ ಪೂಜಾರಿ ಪಾಂಗಳ ಇವರ ಮನೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಸೋಕ್ ಪಿಟ್ ಕಾಮಗಾರಿಗೆ ಧರ್ಮಸ್ಥಳ ಗ್ರಾಮ ಪಂಚಾಯತಿ ಆಡಳಿತಾಧಿಕಾರಿ ಡಾ. ಜಯಕೀರ್ತಿ ಜೈನ್ ಇವರಿಂದ ಚಾಲನೆ ನೀಡಲಾಯಿತು.
ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿ ಗ್ರಾಮ ಸ್ವಚ್ಛತೆಯನ್ನು ಮಾಡಲಾಯಿತು. ಕಾರ್ಯಕ್ರಮದಲ್ಲಿ ಮಾನ್ಯ ಆಡಳಿತ ಅಧಿಕಾರಿ ಡಾ.ಜಯಕೀರ್ತಿ ಜೈನ್ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಉಮೇಶ್ ಇವರು ಸ್ವಚ್ಛತೆಯ ನಿರಂತರತೆ ಹಾಗೂ ಸುಸ್ಥಿರತೆ ಬಗ್ಗೆ ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ನೌಕರರು, ಸ್ವಚ್ಛತಾ ನೌಕರರು, ನೀರು ಗಂಟಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.