ಅನುದಾನರಹಿತ ಶಾಲಾ ಶಿಕ್ಷಕರು, ಸಿಬ್ಬಂದಿ ಹಾಗೂ ಬಿಸಿಯೂಟ ಸಿಬ್ಬಂದಿ ವರ್ಗದವರಿಗೆ ಆರ್ಥಿಕ ನೆರವು

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಸಾಧಕ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಸರ್ಕಾರಿ, ಅನುದಾನಿತ ಪ್ರೌಢಶಾಲೆ ಶಿಕ್ಷಕರು ಮತ್ತು ಸಿಬ್ಬಂದಿಗಳ ಸಹಕಾರದೊಂದಿಗೆ ಕೋವಿಡ್ -19 ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟಕ್ಕೆ ಒಳಗಾದ ಅನುದಾನರಹಿತ ಶಾಲಾ ಶಿಕ್ಷಕರು, ಸಿಬ್ಬಂದಿ ಮತ್ತು ಪ್ರೌಢಶಾಲಾ ಬಿಸಿಯೂಟ ಸಿಬ್ಬಂದಿ ವರ್ಗದವರಿಗೆ ಆರ್ಥಿಕ ನೆರವು ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಅ. 4ರಂದು ಶ್ರೀ ಮಂಜುನಾಥೇಶ್ವರ ಕಲಾಭವನ ಬೆಳ್ತಂಗಡಿಯಲ್ಲಿ ಜರಗಿತು.


ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾ ಕೇಸರಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ನಿವೃತ್ತ ಶಿಕ್ಷಣ ಸಂಯೋಜಕ ರಮೇಶ್, ಪ್ರೌಢಶಾಲಾ ಶಿಕ್ಷಕರ ಸಂಘ ಜಿಲ್ಲಾಧ್ಯಕ್ಷ ಸ್ಟ್ಯಾನಿ ಪಿಂಟೊ, ಬೆಳ್ತಂಗಡಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ, ಶಿಕ್ಷಣ ಸಂಯೋಜಕರಾದ ದಿನೇಶ್, ಸುಭಾಶ್ ಯಾದವ್ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ರಾಷ್ಟ್ರಪ್ರಶಸ್ತಿ ಪಡೆದ ಶಿಕ್ಷಕ ಯಾಕೂಬ್, ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿಯರಾಗಿ ಪ್ರಶಸ್ತಿ ಪಡೆದ ಚಿತ್ರಪ್ರಭಾ, ಸಬೀನ, ಅಕ್ಕಮ್ಮ ಹಾಗೂ ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾದ ಶ್ರೇಯ ಡೊಂಗ್ರೆ, ಆತ್ರೇಯ, ಶೈವಿ ಹಾಗೂ ಪಿಯುಸಿ ಅತ್ಯಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾದ ಹರಿಪ್ರಿಯ, ಆಸ್ಟೆಲ್ ಲೋಬೊ, ರಚನಾ ಆರ್ ಶೆಟ್ಟಿ, ಅನಂತಕೃಷ್ಣ ಇವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಶಿಕ್ಷಕರ ಸಂಘದ ಕಾರ್ಯದರ್ಶಿ ಮಹಮದ್ ರಿಯಾಜ್ ಪ್ರಾಸ್ತವಿಕವಾಗಿ ಮಾತನಾಡಿ,ರಮೇಶ್ ಮಯ್ಯ ಸ್ವಾಗತಿಸಿ, ನಿರಂಜನ್ ಜೈನ್ ಕಾರ್ಯಕ್ರಮ ನಿರೂಪಿಸಿದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.