ಬೆಳ್ತಂಗಡಿ ಲಯನ್ಸ್ ಕ್ಲಬ್‌ಗೆ ಹಲವು ಪ್ರಶಸ್ತಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಲಯನ್ಸ್ ಜಿಲ್ಲೆ 317ಡಿಯ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಹಲವು ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.
ಹಾಸನ, ಚಿಕ್ಕಮಗಳೂರು, ಕೊಡಗು ಹಾಗೂ ದಕ್ಷಿಣ ಕನ್ನಡ ನಾಲ್ಕು ಕಂದಾಯ ಜಿಲ್ಲೆಗಳ 98 ಲಯನ್ಸ್ ಕ್ಲಬ್‌ಗಳನ್ನೊಳಗೊಂಡ ಲಯನ್ಸ್ ಜಿಲ್ಲೆಯ 2019-2020ರ ಜಿಲ್ಲಾ ರಾಜ್ಯಪಾಲ ರೋನಾಲ್ಡ್ ಗೋಮ್ಸ್ ನೇತೃತ್ವದ ದಿಲ್‌ಸೆ ಪ್ರಶಸ್ತಿ ಪುರಸ್ಕಾರ ಸಮಾರಂಭವು ಮಂಗಳೂರಿನ ಬೆಂದೂರ್‌ವೆಲ್ ಚರ್ಚ್ ಸಭಾಂಗಣದಲ್ಲಿ ಜರಗಿತು.
ಕಳೆದ ಲಯನ್ಸ್ ಸೇವಾ ವರ್ಷದಲ್ಲಿ ವಸಂತ ಶೆಟ್ಟಿ ಶ್ರದ್ಧಾರವರ ನೇತೃತ್ವದಲ್ಲಿ ಹಲವು ಕಾರ್ಯಕ್ರಮಗಳನ್ನು, ಸೇವಾ ಚಟುವಟಿಕೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಬೆಳ್ತಂಗಡಿ ಲಯನ್ಸ್ ಕ್ಲಬ್ 9ನೇ ಅತ್ಯುತ್ತಮ ಕ್ಲಬ್ ಆಗಿ ಮೂಡಿಬಂದಿದೆ.
ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ವಸಂತ ಶೆಟ್ಟಿ, ಪ್ರಾಂತೀಯ ಅಧ್ಯಕ್ಷ ರಾಜು ಶೆಟ್ಟಿ, ಕಾರ್ಯದರ್ಶಿ ಸುರೇಶ ಶೆಟ್ಟಿ, ಕೋಶಾಧಿಕಾರಿ ರಾಜೀವ ಗೌಡ, ಪ್ರಶಸ್ತಿ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.