HomePage_Banner_
HomePage_Banner_

ಸುಲ್ಕೇರಿ ಗ್ರಾ.ಪಂ.ಗೆ “ಬೇಟಿ ಬಚಾವೋ-ಬೇಟಿ ಪಡಾವೋ” ಯೋಜನಾ ಪುರಸ್ಕಾರ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಸುಲ್ಕೇರಿ: ಕೇಂದ್ರ ಸರಕಾರದ “ಬೇಟಿ ಬಚಾವೋ, ಬೇಟಿ ಪಡಾವೊ”ಯೋಜನೆಯಡಿ 2019-20ನೇ ಸಾಲಿನಲ್ಲಿ ಗರಿಷ್ಠ ಲಿಂಗಾನುಪಾತ ಹೊಂದಿರುವ ಪಂಚಾಯತ್‌ಗಳಲ್ಲಿ ದ.ಕ ಜಿಲ್ಲೆಯ 5 ಗ್ರಾಮ ಪಂಚಾಯತ್‌ಗಳು ಆಯ್ಕೆಯಾಗಿದ್ದು, ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮ ಪಂಚಾಯತಕ್ಕೆ ಈ ಪುರಸ್ಕಾರ ಲಭಿಸಿದೆ.

ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಅಂಗವಾಗಿ ಅ.20ರಂದು ದ.ಕ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪುರಸ್ಕಾರಕ್ಕೆ ಆಯ್ಕೆಯಾದ 5 ಗ್ರಾಮ ಪಂಚಾಯತ್‌ಗಳಿಗೆ ತಲಾ ರೂ.10000/- ಪ್ರೋತ್ಸಾಹಧನ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಜಿ.ಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಮಮತಾ ಎಂ ಶೆಟ್ಟಿ, ಜಿ.ಪಂ ಸದಸ್ಯ ಧರಣೇಂದ್ರ ಕುಮಾರ್, ಸುಲ್ಕೇರಿ ಗ್ರಾ.ಪಂ.ಆಡಳಿತಾಧಿಕಾರಿ ವಿನಯ್ ಕುಮಾರ್,ಪಂಚಾಯತ್  ಅಭಿವೃದ್ಧಿ ಅಧಿಕಾರಿ  ರವಿ ನಿಂಗಣ ಗೌಡ, ಕಾರ್ಯದರ್ಶಿ ಕೊರಗಪ್ಪ ನಾಯ್ಕ  ಮತ್ತಿತರರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.