HomePage_Banner_
HomePage_Banner_

ನ.ಪಂ. ವಾರ್ಡ್ ಮಟ್ಟದ ಟಾಸ್ಕ್ ಪೋರ್ಸ್ ಸಭೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತದಲ್ಲಿ ವಾರ್ಡ್ ಮಟ್ಟದ ಟಾಸ್ಕ್ ಫೋರ್ಸ್ ಸಭೆ ಇತ್ತೀಚೆಗೆ ನಡೆಯಿತು.
ಸಾಂಕ್ರಾಮಿಕ ರೋಗ ಕೋವಿಡ್ 19 ರೋಗ ನಿಯಂತ್ರಣ ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಅನುಕೂಲವಾಗುವಂತೆ ಪರಿಣಾಮಕಾರಿ ಬೀದಿ ನಾಟಕ ಪ್ರದರ್ಶನದ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಪ.ಪಂ ಮುಖ್ಯಾಧಿಕಾರಿ ಸುಧಾಕರ್ ಮಾತನಾಡಿ, ಪ್ರಕೃತ ಬೆಳ್ತಂಗಡಿ ನ.ಪಂ.ವ್ಯಾಪ್ತಿಯಲ್ಲಿ ಯಾವುದೇ ಕೋರೋನ ರೋಗಿಗಳ ಪತ್ತೆಯಾಗಿರುವುದಿಲ್ಲ ಹಾಗೂ ಸಾರ್ವಜನಿಕರು ಜಾಗೃತಿ ವಹಿಸಿ ಮುಂಜಾಗೃತಾ ಕ್ರಮಗಳನ್ನು ಪಾಲಿಸಿದರೆ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಸಾಧ್ಯ. ಸರ್ಕಾರದ ಮಾರ್ಗಸೂಚಿಗಳನ್ವಯ ಸಾನಿಟೈಸೇಶನ್, ಮಾಸ್ಕ್ ಧರಿಸಿಕೊಂಡು ಬರುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಸಭೆ-ಸಮಾರಂಭಗಳನ್ನು ನಿಯಂತ್ರಿಸಿಕೊಳ್ಳುವುದು, ಜಾತ್ರೆ ಉತ್ಸವ ಹಬ್ಬ-ಹರಿದಿನಗಳನ್ನು ನಿಯಮಿತ ಹಾಗೂ ನಿಗದಿತವಾಗಿ ಆಚರಿಸುವುದು. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸುಡುಮದ್ದುಗಳ ಬಳಕೆ ನಿಯಂತ್ರಣ ಇತ್ಯಾದಿ ವಿಚಾರಗಳಲ್ಲಿ ಗರಿಷ್ಠ ಜಾಗೃತಿ ಹಾಗೂ ಸಿಬ್ಬಂದಿಗಳು ಸದಾ ಕರ್ತವ್ಯ ನಿರ್ವಹಿಸಲು ಬದ್ಧರಾಗಿರಬೇಕು ಎಂದು ಮಾಹಿತಿ ನೀಡಿದರು.
ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಜಾಗೃತಿ ಜಾಥಾವನ್ನು ಸಂಘಟಿಸಲು ಹಾಗೂ ಆರೋಗ್ಯ ಇಲಾಖೆಯ ಸಹಕಾರದೊಂದಿಗೆ ಅ.27 ರಂದು ಹುಣ್ಸೆಕಟ್ಟೆ ಪರಿಸರದಲ್ಲಿ ವಾರ್ಡ್‌ಮಟ್ಟದ ರಾಪಿಡ್ ಆಂಟಿಜನ್ ಟೆಸ್ಟ್‌ಗಳನ್ನು ಏರ್ಪಡಿಸುವುದಾಗಿ ತೀರ್ಮಾನಿಸಲಾಯಿತು.
ಸಭೆಯಲ್ಲಿ ಪ.ಪಂ ಸಿಬ್ಬಂದಿವರ್ಗ, ಅಂಗನವಾಡಿ ಕಾರ್ಯಕರ್ತರು ಭಾಗವಹಿಸಿದ್ದರು. ಸಮುದಾಯ ಸಂಘಟನಾಧಿಕಾರಿ ವೆಂಕಟರಮಣ ಶರ್ಮ ಸ್ವಾಗತಿಸಿ, ವಂದಿಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.