ನಾಳೆ ಡಾ| ಡಿ. ಹೆಗ್ಗಡೆಯವರ 53ನೇ ವರ್ಷದ ಪಟ್ಟಾಭಿಷೇಕ ವರ್ಧಂತ್ಯುತ್ಸವ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ 53ನೇ ವರ್ಷದ ಪಟ್ಟಾಭಿಷೇಕ ವರ್ಧಂತ್ಯುತ್ಸವವು ಅ.24ರಂದು ಶನಿವಾರ ಧರ್ಮಸ್ಥಳದಲ್ಲಿ ಅತ್ಯಂತ ಸರಳ ರೀತಿಯಲ್ಲಿ ಜರುಗಲಿದೆ.
ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಭಗವಾನ್ ಚಂದ್ರನಾಥ ಸ್ವಾಮಿ ಬಸದಿ ಹಾಗೂ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯಲಿದೆ. ನಾಡಿನಾದ್ಯಂತ ಗಣ್ಯರು, ಹೆಗ್ಗಡೆಯವರ ಅಭಿಮಾನಿಗಳು, ಕ್ಷೇತ್ರದ ಭಕ್ತರು, ಸಂಘ-ಸಂಸ್ಥೆಯವರು, ಸರಕಾರಿ ಅಧಿಕಾರಿಗಳು, ಕ್ಷೇತ್ರದ ಸಂಸ್ಥೆಗಳ ಅಧಿಕಾರಿಗಳು, ನೌಕರರು, ಊರ-ಪರವೂರ ನಾಗರಿಕರು, ಧರ್ಮಸ್ಥಳ ಪೇಟೆಯ ವರ್ತಕರು ಸೇರಿದಂತೆ ನಾಗರಿಕರು ಕ್ಷೇತ್ರಕ್ಕೆ ಬಂದು ಹೆಗ್ಗಡೆಯವರಿಗೆ ಭಕ್ತಿಪೂರ್ವಕ ಅಭಿನಂದನೆಗಳನ್ನು, ಗೌರವವನ್ನು ಸಲ್ಲಿಸಲಿದ್ದಾರೆ.


ಶ್ರೀ ಕ್ಷೇತ್ರದಲ್ಲಿ ಪಾರಂಪರಿಕವಾಗಿ ನಡೆದುಕೊಂಡು ಬರುತ್ತಿರುವ ಚತುರ್ವಿಧ ದಾನ ಪರಂಪರೆಯನ್ನು ಮುಂದುವರಿಸಿಕೊಂಡು ಕಾಲದ ಅಗತ್ಯತೆಗೆ ಅನುಗುಣವಾಗಿ ಈ ಪರಂಪರೆಗೆ ಹೊಸ ದಿಕ್ಕನ್ನು ನೀಡಿದವರು ಡಾ. ಹೆಗ್ಗಡೆಯವರು. ಶ್ರೀ ಕ್ಷೇ. ಧ. ಗ್ರಾ. ಯೋಜನೆ, ಸಮುದಾಯ ಅಭಿವೃದ್ಧಿ ಕಾರ್ಯಕ್ರಮ, ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮ, ಸಿರಿ ಗ್ರಾಮೋದ್ಯೋಗ ಸಂಸ್ಥೆ, ಜನಜಾಗೃತಿ ವೇದಿಕೆ ಕಾರ್ಯಕ್ರಮಗಳು, ಆರೋಗ್ಯ ಸುರಕ್ಷಾ ಮತ್ತು ನೈರ್ಮಲ್ಯ ಯೋಜನೆಗಳು, ಪರಿಸರ ಸಂಬಂಧಿತ ಕಾರ್ಯಕ್ರಮಗಳು, ಪ್ರಗತಿ ಬಂಧು, ಸ್ವಸಹಾಯ ಸಂಘಗಳು, ರುಡ್‌ಸೆಟ್ ಮೂಲಕ ಸ್ವ ಉದ್ಯೋಗ ತರಬೇತಿ ಸೇರಿದಂತೆ ಹಲವಾರು ಇಂದು ರಾಜ್ಯದಾದ್ಯಂತ ನಡೆಯುತ್ತಿದ್ದು, ರಾಷ್ಟ್ರ ಹಾಗೂ ಅಂತಾರಾಷ್ಟೀಯ ಮನ್ನಣೆಗೂ ಪಾತ್ರವಾಗಿದೆ.


ಆಯುರ್ವೇದ, ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಕ್ಕೆ ಪ್ರೋತ್ಸಾಹ, ಶಾಂತಿವನ ಟ್ರಸ್ಟ್ ಮೂಲಕ ಶಾಲೆಗಳಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಅನುಷ್ಠಾನ, ಧರ್ಮೋತ್ಥಾನ ಟ್ರಸ್ಟ್ ಮೂಲಕ ರಾಜ್ಯ ಹಾಗೂ ಹೊರ ರಾಜ್ಯದ ನೂರಾರು ದೇವಸ್ಥಾನ, ಬಸದಿ, ಸ್ಮಾರಕಗಳನ್ನು ಶಾಸ್ತ್ರ ಬದ್ಧವಾಗಿ ನವೀಕರಿಸಲಾಗಿದೆ. ಭಜನಾ ತರಬೇತಿ ಕಮ್ಮಟಗಳು, ಯಕ್ಷಗಾನ ತರಬೇತಿ, ಮಂಜೂಷಾ ವಸ್ತು ಸಂಗ್ರಹಾಲಯ, ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನ ಮೊದಲಾದ ಸಂಸ್ಥೆಗಳ ಮೂಲಕ ಸಂಸ್ಕೃತಿ ರಕ್ಷಣೆಯ ಕಾರ್ಯವೂ ನಡೆಯುತ್ತಿದೆ.

ಪ್ರತಿ ವರ್ಷ ಧರ್ಮಸ್ಥಳಲ್ಲಿ ನಡೆಯುವ ಸಾಮೂಹಿಕ ವಿವಾಹ ಕಾರ್ಯಕ್ರಮಗಳು ಬಡ ಕುಟುಂಬಗಳಿಗೆ ಆಧಾರವಾಗಿದ್ದು, ಅನೇಕ ಸಂಘ-ಸಂಸ್ಥೆಗಳು ಧರ್ಮಸ್ಥಳದ ಮಾದರಿಯನ್ನು ಅನುಸರಿಸುತ್ತಿದ್ದಾರೆ. ಜನಜಾಗೃತಿ ವೇದಿಕೆಯ ಮದ್ಯವರ್ಜನ ಶಿಬಿರಗಳಲ್ಲಿ ಸೇರಿ ಮದ್ಯಮುಕ್ತರಾಗಿರುವ ಸಾವಿರಾರು ಕುಟುಂಬಗಳು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಧರ್ಮಸ್ಥಳ ಸೇವಾ ವಿಪತ್ತು ನಿರ್ವಹಣಾ ತಂಡ ರಾಜ್ಯದಾದ್ಯಂತ ಕಾರ್ಯನಿರ್ವಹಿಸುತ್ತಿದೆ. ರಾಜ್ಯದಾದ್ಯಂತ ಅನೇಕ ಶಿಕ್ಷಣ ಸಂಸ್ಥೆಗಳು, ತಾಂತ್ರಿಕ ಕಾಲೇಜುಗಳು, ವೈದ್ಯಕೀಯ ಕಾಲೇಜು, ಕಾನೂನು ಕಾಲೇಜುಗಳು ನಡೆಯುತ್ತಿದೆ. ತಮ್ಮ ಸಂಸ್ಥೆಗಳ ಮೂಲಕ ಈಗಾಗಲೇ ಮೂರು ಗಿನ್ನೆಸ್ ದಾಖಲೆಗಳನ್ನು ಕೂಡ ಮಾಡಲಾಗಿದೆ.
ಸ್ವಚ್ಛ ಧಾರ್ಮಿಕ ಕ್ಷೇತ್ರ ಎಂಬ ಹಿರಿಮೆಗೂ ಪಾತ್ರರಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಡೆಯುತ್ತಿರುವ ಈ ಎಲ್ಲಾ ಕ್ರಾಂತಿಕಾರಕ ಕಾರ್ಯಕ್ರಮಗಳು ಅಪಾರ ಜನಮನ್ನಣೆ ಹಾಗೂ ಹಿರಿಮೆಗೆ ಪಾತ್ರವಾಗಿದ್ದು, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದ ಪುರಸ್ಕಾರಗಳೊಂದಿಗೆ, ಡಾ. ಹೆಗ್ಗಡೆಯವರಿಗೆ ಪದ್ಮವಿಭೂಷಣ ಗೌರವವನ್ನು ತಂದು ಕೊಟ್ಟಿದೆ.

1968ನೇ ಅಕ್ಟೋಬರ್ 24ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ 21ನೇ ಧರ್ಮಾಧಿಕಾರಿಯಾಗಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಪಟ್ಟಾಭಿಷಿಕ್ತರಾಗಿದ್ದರು. ಬಳಿಕ ಅವರು ಕ್ಷೇತ್ರದ ಹಾಗೂ ಸಮಾಜದ ಸರ್ವತೋಮುಖ ಪ್ರಗತಿಗೆ ಅನೇಕ ಪರಿವರ್ತನೆಗಳನ್ನು ಹೊಸ-ಹೊಸ ಯೋಜನೆಗಳನ್ನು ಜಾರಿಗೆ ತಂದು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳ ಅಂತರಾಷ್ಟ್ರೀಯ ಮಟ್ಟದಲ್ಲಿ ಮಾದರಿ ಕ್ಷೇತ್ರವಾಗಿ ಜನಮನ್ನಣೆಗೆ ಪಾತ್ರರಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.