HomePage_Banner_
HomePage_Banner_

ಡಾ| ಡಿ. ವೀರೇಂದ್ರ ಹೆಗ್ಗಡೆಯವರ 53ನೇ ವರ್ಷದ ಪಟ್ಟಾಭಿಷೇಕ ವರ್ಧಂತ್ಯುತ್ಸವ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ 53ನೇ ವರ್ಷದ ಪಟ್ಟಾಭಿಷೇಕ ವರ್ಧಂತ್ಯುತ್ಸವವು ಅ.24ರಂದು ಧರ್ಮಸ್ಥಳದ ಜರುಗಿತು. ಕಾರ್ಯಕ್ರಮದ ಅಂಗವಾಗಿ ಇಂದು ಬೆಳಿಗ್ಗೆ ಭಗವಾನ್ ಚಂದ್ರನಾಥ ಸ್ವಾಮಿ ಬಸದಿ ಹಾಗೂ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯಿತು.

ನಾಡಿನಾದ್ಯಂತ ಗಣ್ಯರು, ಹೆಗ್ಗಡೆಯವರ ಅಭಿಮಾನಿಗಳು, ಕ್ಷೇತ್ರದ ಭಕ್ತರು, ಸಂಘ-ಸಂಸ್ಥೆಯವರು, ಸರಕಾರಿ ಅಧಿಕಾರಿಗಳು, ಕ್ಷೇತ್ರದ ಸಂಸ್ಥೆಗಳ ಅಧಿಕಾರಿಗಳು, ನೌಕರರು, ಊರ-ಪರವೂರ ನಾಗರಿಕರು, ಧರ್ಮಸ್ಥಳ ಪೇಟೆಯ ವರ್ತಕರು ಸೇರಿದಂತೆ ನಾಗರಿಕರು ಕ್ಷೇತ್ರಕ್ಕೆ ಬಂದು ಹೆಗ್ಗಡೆಯವರಿಗೆ ಭಕ್ತಿಪೂರ್ವಕ ಅಭಿನಂದನೆಗಳನ್ನು, ಗೌರವವನ್ನು ಸಲ್ಲಿಸಿದರು.

ಮಾಣಿಲ ಶ್ರೀ ಧಾಮದ ಶ್ರೀ ಮೋಹನದಾಸ ಸ್ವಾಮೀಜಿಯವರು ಆಶೀರ್ವಚನ ನೀಡಿದರು.  ಹೇಮಾವತಿ ವಿ ಹೆಗ್ಗಡೆ ಯವರು ಡಿ. ವೀರೇಂದ್ರ  ಹೆಗ್ಗಡೆಯವರ ಪರಿಚಯದ ಕುರಿತಾತ ಚಿತ್ರೀಕರಣ ವೀಡಿಯೋ ಬಿಡುಗಡೆಗೊಳಿಸಿದರು. ಹಾವೇರಿ ಕರ್ನಾಟಕ ಜಾನಪದ ವಿಶ್ವ ವಿದ್ಯಾಲಯದ ನಿವೃತ್ತ ಉಪಕುಲಪತಿ ಡಾ. ಕೆ ಚೆನ್ನಪ್ಪ ಗೌಡ ಶುಭ ಶಂಸನೆ ಗೈದರು.

ಈ ಸಂದರ್ಭದಲ್ಲಿ ಕ್ಷೇತ್ರದ ಸಿಬ್ಬಂದಿಗಳಾದ ದೇವಸ್ಥಾನದ ಪ್ರಧಾನ ಅರ್ಚಕ ಹರಿನಾರಾಯಣ ನೂರಿತ್ತಾಯ, ಕ್ಷೇತ್ರದ ಹಣ್ಣುಕಾಯಿ ವಿಭಾಗದ ಮೇಲ್ವಿಚಾರಕ ಕೃಷ್ಣ ಕುಮಾರ್, ಕ್ಷೇತ್ರದ ವಸತಿ ಛತ್ರದ ವ್ಯವಸ್ಥಾಪಕ ಶಂಕರ ಶೆಟ್ಟಿ ಇವರನ್ನು ಹೆಗ್ಗಡೆಯವರು ಸನ್ಮಾನಿಸಿ ಗೌರವಿಸಿದರು.

ಈ ಸಂಧರ್ಭದಲ್ಲಿ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಶುಭ ಹಾರೈಸಿದರು.

✳️ ಡಾ.ವೀರೇಂದ್ರ ಹೆಗ್ಗಡೆಯವರ 53 ನೇ ಪಟ್ಟಾಭಿಷೇಕ ವರ್ಧಂತ್ಯೋತ್ಸವದ ನೇರಪ್ರಸಾರ

ವೀಕ್ಷಿಸಿ – ಸುದ್ದಿ ನ್ಯೂಸ್ ಬೆಳ್ತಂಗಡಿ
👇🏻
YOUTUBE LINK

 

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.