HomePage_Banner_
HomePage_Banner_
HomePage_Banner_

ತಾಲೂಕಿನ ಮೂವರು ಸಾಧಕರಿಗೆ ರಾಜ್ಯಮಟ್ಟದ ವಿಶ್ವಕನ್ನಡ ಕನ್ಮಣಿ ಪ್ರಶಸ್ತಿ

Advt_NewsUnder_1

1ಬೆಂಗಳೂರು: ವಿಶ್ವಕನ್ನಡ ಸಾಹಿತ್ಯ ಸಾಂಸ್ಕೃತಿಕ ಪರಿಷತ್ ಬೆಂಗಳೂರು 2015-16ನೇ ಸಾಲಿನಲ್ಲಿ ರಾಜ್ಯಮಟ್ಟದಲ್ಲಿ 35 ಮಂದಿಗೆ ಕೊಡಮಾಡುವ “ವಿಶ್ವಕನ್ನಡ ಕನ್ಮಣಿ” ಪ್ರಶಸ್ತಿ ಗೆ ಈ ಬಾರಿ ಬೆಳ್ತಂಗಡಿ ತಾಲೂಕಿನ ಮೂರು ಮಂದಿ ಬಾಜನರಾಗಿದ್ದಾರೆ.
ಯಕ್ಷಗಾನ ಕಲಾವಿದ ಹಾಗೂ ಸಂಘಟಕರು ಎಂಬ ನೆಲೆಯಲ್ಲಿ ಕರ್ನಾಟಕ ಯಕ್ಷಗಾನ ಅಕಾಡಮಿ ಮಾಜಿ ಸದಸ್ಯ ಹಾಗೂ ಸಂಘಟಕ ಅಶೋಕ ಭಟ್ಟ ಉಜಿರೆ, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಹಾಗೂ ಕನ್ನಡಪರ ಸಂಘಟಕ ಎಂಬ ನೆಲೆಯಲ್ಲಿ ಉಜಿರೆ ಎಸ್‌ಡಿಎಂ ಕಾಲೇಜು ಉಪನ್ಯಾಸಕ ಡಾ|| ಎಂ. ಪಿ ಶ್ರೀನಾಥ್ ಮತ್ತು ಗ್ರಾಮೀಣ ಕನ್ನಡ ಪತ್ರಿಕೋಧ್ಯಮ ಸೇವೆ ಎಂಬ ನೆಲೆಯಲ್ಲಿ ಬೆಳ್ತಂಗಡಿ ಸುದ್ದಿ ಬಿಡುಗಡೆ ವಾರಪತ್ರಿಕೆಯ ಸ್ಥಾನೀಯ ಸಂಪಾದಕ ಹಾಗೂ ವ್ಯವಸ್ಥಾಪಕರಾಗಿರುವ ಮಂಜುನಾಥ್ ರೈ ಎನ್ ಅವರು ಆಯ್ಕೆಯಾಗಿದ್ದಾರೆ.
ಈ ಬಗ್ಗೆ ವಿಶ್ವಕನ್ನಡ ಸಾಹಿತ್ಯ ಸಾಂಸ್ಕೃತಿಕ ಪರಿಷತ್ ಬೆಂಗಳೂರು ಇದರ ರಾಜ್ಯಾಧ್ಯಕ್ಷ ಅಗಸನೂರು ತಿಮ್ಮಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಎಲ್ಲಾ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಏ. 10 ರಂದು ಉಜಿರೆ ಎಸ್‌ಡಿಎಂ ಕಾಲೇಜಿನ ಆವರಣದಲ್ಲಿ ನಡೆಯುವ 11 ನೇ ರಾಜ್ಯಮಟ್ಟದ ಜಾನಪದ ಸಾಂಸ್ಕೃತಿಕ ಉತ್ಸವ ಸಮಾರಂಭದಲ್ಲಿ ಪ್ರಧಾನ ಅತಿಥಿಯಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ|| ಡಿ ವೀರೇಂದ್ರ ಹೆಗ್ಗಡೆಯವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.