ಬಳಂಜ : ಬೀಳ್ಕೊಡುಗೆ ಸಮಾರಂಭ

Advt_NewsUnder_1
Advt_NewsUnder_1

balanja school copy ಬಳಂಜ: ಸ.ಉ.ಪ್ರಾ.ಶಾಲೆ ಬಳಂಜದ ೨೦೧೫-೧೬ನೇ ಸಾಲಿನ ೮ನೇ ತರಗತಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವು ಮಾ. ೩೦ರಂದು ನಡೆಯಿತು.
ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಸತೀಶ್ ಕೆ. ಇವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಶಾಲೆಯಿಂದ ನಿರ್ಗಮಿಸುತ್ತಿರುವ ವಿದ್ಯಾರ್ಥಿಗಳು ತಮ್ಮ ಅನಿಸಿಕೆ ವ್ಯಕ್ತಪಡಿಸಿ, ಶಾಲೆಗೆ ಬಹು ಉಪಯೋಗಿ ಪ್ರಿಂಟರನ್ನು ಕೊಡುಗೆಯಾಗಿ ನೀಡಿದರು.
ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಧರ್ಣಮ್ಮ ಟೀಚರ್, ಶಿಕ್ಷಕರು ಹಾಗೂ ಎಸ್‌ಡಿಎಂಸಿ ಉಪಾಧ್ಯಕ್ಷರು, ಸದಸ್ಯರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮವನ್ನು ನಿತಿನ್ ಎಸ್. ಶೆಟ್ಟಿ ಸ್ವಾಗತಿಸಿ, ಕು. ಕ್ಷಮಾ ನಿರೂಪಿಸಿದರು. ಕು. ಪ್ರತಿಕ್ಷಾ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.