ಉಜಿರೆ ಎನ್.ಎಸ್.ಎಸ್. ರಾಷ್ಟ್ರೀಯ ಯೋಜನೋತ್ಸವ ಉದ್ಘಾಟನೆ

Advt_NewsUnder_1
Advt_NewsUnder_1

sdmಉಜಿರೆ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ರಾಜ್ಯಮಟ್ಟದ ರಾಷ್ಟ್ರೀಯ ಸೇವಾ ಯೋಜನೋತ್ಸವ ಉದ್ಘಾಟನಾ ಸವiರಂಭವು ಎ. 9ರಂದು ಜರಗಿತು. ಉದ್ಘಾಟನೆಯನ್ನು ಕರ್ನಾಟಕ ಸರಕಾರ ಯುವ ಸಬಲೀಕರಣ ಹಾಗೂ ಕ್ರೀಡೆ ಮತ್ತು ಮೀನುಗಾರಿಕೆ ಸನ್ಮಾನ್ಯ ರಾಜ್ಯ ಸಚಿವ ಕೆ. ಅಭಯಚಂದ್ರ ಜೈನ್ ನೆರವೇರಿಸಿದರು. ಅಧ್ಯಕ್ಷತೆಯನ್ನು ಉಜಿರೆ ಶ್ರೀ ಧ.ಮಂ. ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಪ್ರೊ. ಎಸ್. ಪ್ರಭಾಕರ್ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಪ್ರಧಾನ ಕಾರ್ಯದರ್ಶಿ ಕಪಿಲ್ ಮೋಹನ್, ಕುಲಪತಿ ಪ್ರೊ. ಕೆ. ಭೈರಪ್ಪ, ನಿರ್ದೇಶಕ ಎ.ಎನ್. ಪೂಜಾರ್, ಕಾರ್ಯಕ್ರಮ ಸಂಯೋಜನಾಧಿಕಾರಿ ಶ್ರೀಮತಿ ವಿನೀತಾ ರೈ ಉಪಸ್ಥಿತರಿದ್ದರು. ಪ್ರಾಂಶುಪಾಲ ಪ್ರೊ. ಕೆ.ಎಸ್. ಮೋಹನ ನಾರಾಯಣ ಸ್ವಾಗತಿಸಿ, ಕಾರ್ಯಕ್ರಮಾಧಿಕಾರಿ ಭಾನುಪ್ರಕಾಶ್ ವಂದನಾರ್ಪಣೆಗೈದರು. ಡಾ| ಬಿ.ಎ. ಕುಮಾರ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.