HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಮೂಡುಕೋಡಿ: ವ್ಯಕ್ತಿ ಆತ್ಮಹತ್ಯೆ

ವೇಣೂರು: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಮೂಡುಕೋಡಿಯಲ್ಲಿ ಎ.೫ರಂದು ಸಂಭವಿಸಿದೆ.
ಮೂಡುಕೋಡಿಯ ಹೊಸವಕ್ಲು ನಿವಾಸಿ ಆನಂದ ಆಚಾರ್ಯ (೬೫) ಆತ್ಮಹತ್ಯೆ ಮಾಡಿಕೊಂಡವರು. ಕಳೆದ ಕೆಲ ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನೂ ಪಡೆದುಕೊಂಡಿದ್ದರು. ರಾತ್ರಿ ಮನೆಮಂದಿ ಮಲಗಿದ್ದ ಸುಮಾರು ಮುಂಜಾನೆ ೨.೩೦ರ ಸುಮಾರಿಗೆ ಮನೆಯ ಕೊಟ್ಟಿಗೆಯ ಪಕ್ಕಾಸಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರು ಪತ್ನಿ, ಮಕ್ಕಳಾದ ಪ್ರಕಾಶ್, ಪ್ರಸಾದ್, ಚಿತ್ರಾಕ್ಷಿ, ಪ್ರತಿಮಾ ಅವರನ್ನು ಅಗಲಿದ್ದಾರೆ. ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.