ಯಡ್ಡಿ ವಿರುದ್ದ ಮೇಲ್ಮನವಿಗೆ ಸಂಪುಟ ಅಸ್ತು

ಡಿನೋಟಿಫಿಕೇಷನ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ಬುಧವಾರ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಸಂಪುಟ ಸಭೆಯ ನಂತರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು, ಯಡಿಯೂರಪ್ಪ ಅವರ ವಿರುದ್ಧದ ಕೇಸ್‌ಗಳನ್ನು ರದ್ದು ಮಾಡಿ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು. ಬಿಎಸ್‌ವೈ ವಿರುದ್ಧದ ೧೬ ಪ್ರಕರಣಗಳ ಪೈಕಿ ೧೫ ಕೇಸ್ ಗಳಲ್ಲಿ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಟಿ.ಬಿ.ಜಯಚಂದ್ರ ಅವರು ತಿಳಿಸಿದ್ದಾರೆ. ಈ ಸಂಬಂಧ ಕಾನೂನು ಪ್ರಕ್ರಿಯೆಗಾಗಿ ವಕೀಲ ಜೋಸೆಫ್ ಅರಿಸ್ಟಾಟಲ್ ಅವರನ್ನು ನೇಮಕ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.