ಧರ್ಮಸ್ಥಳ: ನೂತನ ವಸತಿ ಗೃಹ ಉದ್ಘಾಟನೆ

 ಧರ್ಮಸ್ಥಳ : ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ 500 ಕೊಠಡಿಗಳನ್ನೊಳಗೊಂಡ ನೂತನ ವಸತಿ ಗೃಹವನ್ನು ನಿರ್ಮಿಸಿದ್ದು, ಎ. 24ರಂದು ಉದ್ಘಾಟನೆಗೊಳ್ಳಲಿದೆ.
ಕೆ.ಎಸ್.ಆರ್.ಟಿ.ಸಿ. ಹೊಸ ಬಸ್ ನಿಲ್ದಾಣದ ಬಳಿ ಇರುವ ಸಹ್ಯಾದ್ರಿ ವಸತಿ ಗೃಹವನ್ನು ಶೃಂಗೇರಿ ಶ್ರೀ ಶಾರದಾ ಪೀಠದ ಶ್ರೀ ಭಾರತೀತೀರ್ಥ ಸ್ವಾಮೀಜಿ ಮತ್ತು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಭಾನುವಾರ ಬೆಳಿಗ್ಗೆ 10 ಗಂಟೆಗೆ ಉದ್ಘಾಟಿಸಲಿದ್ದಾರೆ. ವಸತಿ ಸಚಿವ ಅಂಬರೀಶ್, ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಶಾಸಕ ಕೆ. ವಸಂತ ಬಂಗೇರ ಮುಖ್ಯ ಅತಿಥಿಗಳಾಗಿ ಭಾವಹಿಸುವರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು. ನೂತನ ಕಟ್ಟಡ ಉದ್ಘಾಟನೆ ಬಳಿಕ ಅಮೃತವರ್ಷಿಣಿ ಸಭಾಭವನದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ಡಿ. ಹರ್ಷೇಂದ್ರ ಕುಮಾರ್ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.