ಕೊಕ್ಕಡ ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಶಿಲಾನ್ಯಾಸ

kokkada 1

kokkada 2

kokkadaಕೊಕ್ಕಡ: ಎ. 22ರಂದು ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಗರ್ಭಗುಡಿಯ ಪುನರ್ನವೀಕರಣಕ್ಕಾಗಿ ಕ್ಷೇತ್ರದ ತಂತ್ರಿಗಳಾದ ಎಡಮನೆ ದಾಮೋದರ ತಂತ್ರಿಗಳ ನೇತೃತ್ವದಲ್ಲಿ ಶಿಲಾನ್ಯಾಸವು ನೆರವೇರಿತು.

ಕಾವು ತ್ರಿಗುಣಾತ್ಮಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಗೌರವಾಧ್ಯಕ್ಷರಾದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಅವರು ಆಶೀರ್ವಚನ ನೀಡಿದರು. ಅಧ್ಯಕ್ಷತೆಯನ್ನು ಕಾವು ತ್ರಿ.ಶ್ರೀ.ದು.ದೇ. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ತುಕ್ರಪ್ಪ ಶೆಟ್ಟಿ ನೂಜೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರ ಸಚ್ಚಿದಾನಂದ ಭಟ್, ಬೆಂಗಳೂರು ವಕೀಲ ಹರೀಶ್ ಪೂಂಜ, ಉಪ್ಪಿನಂಗಡಿ ದಂತ ವೈದ್ಯ ಡಾ| ರಾಜರಾಂ, ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ ಭಾಗವಹಿಸಿದ್ದರು. ಪುತ್ತೂರು ಎಚ್.ಒ.ಡಿ.ಸಿವಿಲ್ ಡಿಪಾರ್ಟ್‌ಮೆಂಟ್ ವಿವೇಕಾನಂದ ಪಾಲಿಟೆಕ್ನಿಕ್‌ನ ರವಿರಾಮ ಎಸ್. ಗೋವಿಂದೂರು, ಕಾವು ತ್ರಿ.ಶ್ರೀ.ದು.ದೇವಸ್ಥಾನ ಆಡಳಿತ ಸಮಿತಿ ಅಧ್ಯಕ್ಷ ಎನ್.ವಿ.ವ್ಯಾಸ ನೆಕ್ಕರ್ಲ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.