ಬೆಳ್ತಂಗಡಿ: ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇದರ ಅಂತಿಮ ಪದವಿ ತರಗತಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವು ಎ. 26ರಂದು ಜರಗಿತು.
ಅಧ್ಯಕ್ಷತೆಯನ್ನು ಶಾಸಕ ಕೆ. ವಸಂತ ಬಂಗೇರ ವಹಿಸಿದ್ದರು. ಅತಿಥಿಯಾಗಿ ನಿವೃತ್ತ ಎಸ್.ಪಿ. ಪೀತಾಂಬರ ಹೇರಾಜೆ ಭಾಗವಹಿಸಿದ್ದರು. ವಿದ್ಯಾರ್ಥಿಗಳಾದ ಮಸೂದ್, ಬಂಗೇರ ಸೀಮಾ ಸೀತಾರಾಂ, ಅಖಿಲೇಶ್ ಪಿ., ವಿಜಿತ್ ವಿ. ಥೋಮಸ್ ಇವರುಗಳು ಅನಿಸಿಕೆ ವ್ಯಕ್ತಪಡಿಸಿದರು.
ಅಭಿಜಿತ್ ವಿ. ಪ್ರಾರ್ಥಿಸಿದರು. ಪ್ರಾಂಶುಪಾಲರಾದ ಎ. ಕೃಷ್ಣಪ್ಪ ಪೂಜಾರಿ ಸ್ವಾಗತಿಸಿ, ವಿದ್ಯಾರ್ಥಿ ಉಪನಾಯಕ ವಿನೋದರ ಧನ್ಯವಾದವಿತ್ತರು. ಕಾರ್ಯಕ್ರಮವನ್ನು ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಬಿ.ಎ. ಶಮೀವುಲ್ಲಾ ನಿರೂಪಿಸಿದರು.