ಪಿ.ಎಂ.ಗೆ ಪತ್ರ ಬರೆದ ಸಿ.ಎಂ.

Advt_NewsUnder_1
Advt_NewsUnder_1
Advt_NewsUnder_1

ಕಳಸಾ ಬಂಡೂರಿ ನಾಲಾ ಯೋಜನೆಯ ವಿವಾದವನ್ನು ನ್ಯಾಯಾಧೀಕರಣದ ಹೊರಗೆ ಬಗೆಹರಿಸಿಕೊಳ್ಳಲು ಸರ್ವಪಕ್ಷಗಳ ಸಭೆ ಕರೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರದಲ್ಲಿ, ಏಪ್ರಿಲ್ ೨ರಂದು ಸರ್ವಪಕ್ಷಗಳ ಸಭೆ ಕರೆದು ಕಳಸಾ ಬಂಡೂರಿ ನಾಲಾ ಯೋಜನೆಯ ವಿಚಾರದಲ್ಲಿ ಮತ್ತೊಮ್ಮೆ ಪ್ರಧಾನಮಂತ್ರಿಗಳ ಮಧ್ಯಸ್ಥಿಕೆಗೆ ಮನವಿ ಮಾಡುವ ಕುರಿತು ನಿರ್ಣಯ ಕೈಗೊಳ್ಳಲಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ೧೯೭೭ರಲ್ಲಿ ತೆಲಗು-ಗಂಗಾ ಯೋಜನೆ ವಿವಾದವಾದ ಸಂದರ್ಭದಲ್ಲಿ ಪ್ರಧಾನ ಮಂತ್ರಿಗಳು ಮಧ್ಯಸ್ಥಿಕೆ ವಹಿಸಿದ ಉದಾಹರಣೆ ಇದೆ. ಕಳಸಾ ಬಂಡೂರಿ ಯೋಜನೆ ವಿವಾದವನ್ನು ಹಾಗೆಯೇ ಬಗೆಹರಿಸಬೇಕೆಂದು ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.