ಬೆಳ್ತಂಗಡಿ ತಾ.ಪಂ : ಚುನಾವಣೆ ಇಂದು

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಪಂಚಾಯತಿ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಗಳಿಗೆ ಮೆ 10ರಂದು ಚುನಾವಣೆ ನಡೆಯಲಿದ್ದು ಅಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿ ಮಹಿಳಾ ಮೀಸಲಾತಿಯಿದ್ದು ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಿದೆ.
ಅಧ್ಯಕ್ಷ ಸ್ಥಾನಕ್ಕೆ ಅರಸಿನಮಕ್ಕಿ ಕ್ಷೇತ್ರದಿಂದ ಆಯ್ಕೆಯಾಗಿರುವ ಕಾಂಗ್ರೆಸ್ ಸದಸ್ಯೆ ದಿವ್ಯಜ್ಯೋತಿ ಅವಿರೋಧವಾಗಿ ಆಯ್ಕೆಯಾಗುವುದು ಖಚಿತವಾಗಿದೆ. ಉಪಾಧ್ಯಕ್ಷ ಸ್ಥಾನ ಬಿಜೆಪಿ ಪಾಲಾಗಲಿದ್ದು ಹಲವರು ಆಕಾಂಕ್ಷಿಗಳಿದ್ದಾರೆ.
ಬೆಳ್ತಂಗಡಿ ತಾಲೂಕು ಪಂಚಾಯಿತಿಯಲ್ಲಿ 26 ಸ್ಥಾನಗಳಿದ್ದು ಬಿಜೆಪಿ 14 ಸ್ಥಾನಗಳನ್ನು ಪಡೆದು ಬಹುಮತ ಗಳಿಸಿಕೊಂಡಿದೆ. ಕಾಂಗ್ರೆಸ್ 12ಸ್ಥಾನಗಳನ್ನು ಹೊಂದಿದೆ. ಆದರೆ ಮೀಸಲಾತಿಯ ಕಾರಣದಿಂದ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲಾಗಲಿದೆ. ಉಪಾಧ್ಯಕ್ಷ ಸ್ಥಾನದ ಬಗ್ಗೆ ಬಿಜೆಪಿಯಲ್ಲಿ ಇನ್ನೂ ಅಂತಿಮ ನಿರ್ಧಾರವಾಗಿಲ್ಲ. ಈ ಬಗ್ಗೆ ನಾಯಕರ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿದೆ. ಇದೀಗ 5ವರ್ಷಗಳ ಬಳಿಕ ತಾ.ಪಂ ಅಧ್ಯಕ್ಷ ಕಾಂಗ್ರೆಸ್ ಪಾಲಾಗಲಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.