ಬಂಟ್ವಾಳ ತಾ.ಪಂ: ಅವಿರೋಧ ಆಯ್ಕೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬಂಟ್ವಾಳ ತಾಲೂಕು ಪಂಚಾಯತ್‌ನ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಚಂದ್ರಹಾಸ ಕರ್ಕೇರಾ ಹಾಗೂ ಉಪಾಧ್ಯಕ್ಷರಾಗಿ ಅಬ್ಬಾಸ್ ಅಲಿ ಬಿ.ಎಂ. ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಂಗಳವಾರ ಬಿ.ಸಿ.ರೋಡಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಮಂಗಳೂರು ಆಯುಕ್ತ ಡಾ. ಅಶೋಕ್ ಡಿ. ಆರ್ ಈ ಆಯ್ಕೆ ಪ್ರಕ್ರಿಯೆ ನಡೆಸಿದ್ದಾರೆ. ಮಂಗಳವಾರ ಪಕ್ಷದ ನಾಯಕರ ಉಪಸ್ಥಿತಿಯಲ್ಲಿ ಇಬ್ಬರು ಸದಸ್ಯರು ಚುನಾವಣಾಧಿಕಾರಿಗೆ ನಾಮಪತ್ರವನ್ನು ಸಲ್ಲಿಸಿದ್ದು, ಬಿಜೆಪಿಯಿಂದ ಯಾವುದೇ ನಾಮಪತ್ರ ಸಲ್ಲಿಕೆಯಾಗದ ಹಿನ್ನಲೆಯಲ್ಲಿ ಸಂಜೆ ೩ ಗಂಟೆಗೆ ನಡೆದ ಆಯ್ಕೆ ಪ್ರಕ್ರಿಯೆ ಸಭೆಯಲ್ಲಿ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆಗೊಳಿಸಲಾಯಿತು. ತಹಶೀಲ್ದಾರ್ ಪುರಂದರ ಹೆಗ್ಡೆ, ಕಾರ್ಯನಿರ್ವಾಹಣಾಧಿಕಾರಿ ಸಿಪ್ರಿಯಾನ್ ಮಿರಾಂಡ ಸಹಕರಿಸಿದ್ದಾರೆ. ಬಂಟ್ವಾಳ ತಾಲೂಕು ಪಂಚಾಯಿತಿ ೩೪ ಸದಸ್ಯ ಬಲವನ್ನು ಹೊಂದಿದ್ದು, ಈ ಪೈಕಿ ಕಾಂಗ್ರೆಸ್ ೨೨ ಸ್ಥಾನಗಳನ್ನು ಗೆದ್ದುಕೊಂಡು ಪೂರ್ಣ ಬಹುಮತವನ್ನು ಪಡೆದುಕೊಂಡಿದ್ದರೆ, ಬಿಜೆಪಿ ೧೨ ಸ್ಥಾನಗಳನ್ನು ಪಡೆದುಕೊಂಡಿತ್ತು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.