ವರದಿ ಈ ತಿಂಗಳೇ ಬಹಿರಂಗ: ಆಂಜನೇಯ

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಈ ತಿಂಗಳೊಳಗೆ ಬಹಿರಂಗಪಡಿಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಆಂಜನೇಯ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮೀಕ್ಷೆಯಿಂದ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ವಸ್ತುಸ್ಥಿತಿ ಬಹಿರಂಗವಾಗುತ್ತದೆ. ಇದರ ಆಧಾರದ ಮೇಲೆ ಜನಪರ ಯೋಜನೆಗಳನ್ನು ರೂಪಿಸಲು ಅನುಕೂಲವಾಗುತ್ತದೆ. ಈ ಹಿನ್ನೆಲೆಯಲ್ಲಿ ಈ ಸಮೀಕ್ಷೆ ನಡೆಸಲಾಗಿತ್ತು. ಇದೀಗ ವರದಿ ಸಿದ್ಧವಾಗಿದೆ ಎಂದಿದ್ದು, ಅಧಿಕಾರಿಗಳ ಸಭೆ ನಡೆಸಿ, ವರದಿ ಬಹಿರಂಗಕ್ಕೆ ದಿನಾಂಕ ನಿಗದಿಪಡಿಸಲಾಗುವುದು ಎಂದು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.