ರೈಲ್ವೆ ಸ್ಟೇಷನ್‌ಗೆ ರಾಯಣ್ಣನ ಹೆಸರು

ವಿವಿಧ ಕನ್ನಡ ಪರ ಸಂಘಟನೆಗಳ ಸುದೀರ್ಘ ಹೋರಾಟದ ಫಲವಾಗಿ ಬೆಂಗಳೂರು ನಗರ ರೈಲ್ವೆ ನಿಲ್ದಾಣಕ್ಕೆ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಎಂದು ರೈಲ್ವೆ ಸಚಿವ ಸುರೇಶ್ ಪ್ರಭು ನಾಮಕರಣ ಮಾಡಿದ್ದಾರೆ. ಭಾನುವಾರ ಬೆಂಗಳೂರು ನಗರ ರೈಲ್ವೆ ನಿಲ್ದಾಣದಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ರೈಲ್ವೆ ಸಚಿವ ಸುರೇಶ್ ಪ್ರಭು ಮೂರು ಮಹಾತ್ವಾಕಾಂಕ್ಷಿ ರೈಲ್ವೆ ಯೋಜನೆಗಳಿಗೆ ಚಾಲನೆ ನೀಡಿದ್ದು, ನಗರ ರೈಲ್ವೆ ನಿಲ್ದಾಣಕ್ಕೆ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಎಂದು ರೈಲ್ವೆ ಸಚಿವ ಸುರೇಶ್ ಪ್ರಭು ನಾಮಕರಣ ಮಾಡಿದ್ದಾರೆ. ಈ ವೇಳೆ ದಾವಣಗೆರೆ ರೈಲ್ವೆ ಮೇಲ್ಸೇತುವೆ ಲೋಕಾರ್ಪಣೆ ಹಾಗೂ ಕೊಪ್ಪಳ ರೈಲ್ವೆ ಮೇಲ್ಸೇತುವೆ ಕಾಮಗಾರಿಗೆ ಸಹ ಚಾಲನೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಕೇಂದ್ರ ಸಚಿವರಾದ ಡಿ.ವಿ. ಸದಾನಂದಗೌಡ, ಅನಂತಕುಮಾರ್, ವೆಂಕಯ್ಯ ನಾಯ್ಡು ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.