ಆಂದೋಲನಕ್ಕೆ ಚಾಲನೆ

ಶಿಕ್ಷಣ ಇಲಾಖೆ ಹಾಗೂ ಮಕ್ಕಳ ಹಕ್ಕುಗಳ ಆಯೋಗ ಜಂಟಿಯಾಗಿ ಈ ವರ್ಷ ಜಾರಿಗೆ ತಂದ ನಮ್ಮ ನಡೆ ಶಾಲೆ ಕಡೆ ವಿಶೇಷ ದಾಖಲಾತಿ ಆಂದೋಲನಕ್ಕೆ ಬಂಟ್ವಾಳ ತಾಲೂಕಿನ ಕಾವಳ ಮೂಡೂರು ಗ್ರಾಮದ ಕೆದ್ದಳಿಕೆ ಹಿ.ಪ್ರಾಥಮಿಕ ಶಾಲೆಯಲ್ಲಿ ಚಾಲನೆ ನೀಡಲಾಗಿದೆ. ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ದಿನೇಶ್ ಶೆಟ್ಟಿಯವರು ಚಾಲನೆ ನೀಡಿದ್ದು, ಪ್ರಸ್ತಾವಿಕವಾಗಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕ ರಮೇಶ್ ನಾಯಕ್ ಅವರು, ಶಾಲೆಯಿಂದ ಹೊರಗುಳಿದ ೬ರಿಂದ ೧೪ ವರ್ಷದೊಳಗಿನ ಎಲ್ಲಾ ಮಕ್ಕಳನ್ನು ಶಾಲೆಗೆ ಸೇರಿಸುವುದು, ಹಾಗೂ ಶಾಲಾ ವ್ಯಾಪ್ತಿಯ ೫ ವರ್ಷ ಮೇಲ್ಪಟ್ಟ ಮಕ್ಕಳನ್ನು ಶಾಲೆಗೆ ದಾಖಲಿಸುವುದು ಈ ವಿಶೇಷ ಆಂದೋಲನದ ಮುಖ್ಯ ಉದ್ದೇಶವಾಗಿದ್ದು, ಆಯಾ ಶಾಲಾ ವ್ಯಾಪ್ತಿಯ ಸಂಘಸಂಸ್ಥೆಗಳು, ಪ್ರಜ್ಞಾವಂತ ನಾಗರೀಕರು ಈ ಕಾರ್ಯದಲ್ಲಿ ಸಹಭಾಗಿಗಳಾದರೆ ಯಶಸ್ಸು ಸಾಧ್ಯ, ಈ ನಿಟ್ಟಿನಲ್ಲಿ ಜಾಗೃತಿ ಮೂಡಿಸಲು ಆಂದೋಲನಕ್ಕೆ ಚಾಲನೆಯ ಜೊತೆಗೆ  ಜಾಥಾ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.