ಆರಂಬೋಡಿ : ಆರಂಬೋಡಿ ಗ್ರಾಮ ಪಂಚಾಯತುನ ನೂತನ ಅಧ್ಯಕ್ಷರಾಗಿ ಪ್ರಭಾಕರ ಎಚ್. ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷೆಯಾಗಿ ಗ್ರಾ.ಪಂ.ನ ಮಾಜಿ ಅಧ್ಯಕ್ಷೆ ಆಶಾ ಎಸ್. ಶೆಟ್ಟಿ ಆಯ್ಕೆಗೊಂಡಿದ್ದಾರೆ.
ಅಧ್ಯಕ್ಷ, ಉಪಾಧ್ಯಕ್ಷ ಗಾದಿಗೆ ಗ್ರಾ.ಪಂ. ಸದಸ್ಯರುಗಳ ಚುನಾವಣೆ ಪ್ರಕ್ರಿಯೆ ಸೋಮವಾರ ನಡೆಯಿತು. ಬಿಜೆಪಿ ತಾಲೂಕು ಅಧ್ಯಕ್ಷ ವಿ. ಬಾಲಕೃಷ್ಣ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯಂತ್ ಕೋಟ್ಯಾನ್, ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.
ಬೆಳ್ತಂಗಡಿ ತಹಶಿಲ್ದಾರ್ ಪ್ರಸನ್ನಮೂರ್ತಿ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.