ಬೆಳ್ತಂಗಡಿ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿರಂತರ ಪ್ರಯತ್ನದಿಂದ ರಾಜ್ಯದಲ್ಲಿ ಲಕ್ಷಾಂತರ ಬಡ ಕುಟುಂಬಗಳು ಸ್ವಾವಲಂಬಿ ಬದುಕು ಸಾಗಿಸುವಂತಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.
ಚಿಕ್ಕಮಗಳೂರಿನ ಮಲ್ಲಂದೂರು ರಸ್ತೆ ಹಿಂಭಾಗದಲ್ಲಿ ನಿರ್ಮಿಸಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಧಾನ ಕಛೇರಿ ಸ್ಪೂರ್ತಿಸೌಧ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ಬಡವರು ಮತ್ತು ಸಾಮಾನ್ಯ ಜನತೆ ಸ್ವಾವಲಂಬಿಯಾಗಿ ನೆಮ್ಮದಿಯಿಂದ ಬಾಳಬೇಕು ಎಂಬ ಮಹತ್ವಾಕಾಂಕ್ಷೆಯಿಂದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹತ್ತು ವರ್ಷಗಳಿಂದ ನಿರಂತರ ಶ್ರಮಿಸುತ್ತಿದೆ ಎಂದರು.
ಕಟ್ಟಡ ಉದ್ಘಾಟಿಸಿ ಮಾತನಾಡಿದ ಹೇಮಾವತಿ ವಿ.ಹೆಗ್ಗಡೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯಶಸ್ಸಿನ ಹಿಂದಿನ ಶಕ್ತಿ ಅದರ ಕಾರ್ಯಕರ್ತರು ಎಂದು ತಿಳಿಸಿದರು.
ವಿಧಾನಪರಿಷತ್ ಮಾಜಿ ಸಭಾಪತಿ ಬಿ.ಎಲ್.ಶಂಕರ್, ಶಾಸಕ ಸಿ.ಟಿ ರವಿ, ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್.ಮಂಜುನಾಥ್ ಶುಭ ಹಾರೈಸಿದರು.