ಮರೋಡಿ : ಮರೋಡಿ ಗ್ರಾಮ ಪಂಚಾಯತದ 2015-16ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆ ಗ್ರಾಮ ಪಂಚಾಯತದ ಅಧ್ಯಕ್ಷ ಸದಾನಂದ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಎ.18ರಂದು ಪಂಚಾಯತು ಸಭಾಂಗಣದಲ್ಲಿ ನಡೆಯಿತು.
ಪಂಚಾಯತದ ಅಭಿವೃದ್ಧಿ ಅಧಿಕಾರಿ ಆಶಾಲತಾ ಸ್ವಾಗತಿಸಿದರು. ಕಾರ್ಯದರ್ಶಿ ಶೇಖರ ಎಂ. ಗತಸಭೆಯ ವರದಿ, ಜಮಾ-ಖರ್ಚು, ವಾರ್ಡ್ ಸಭೆಯ ವರದಿಯನ್ನು ವಾಚಿಸಿದರು. ಸಭೆಯಲ್ಲಿ ಗ್ರಾಮ ಪಂಚಾಯತು ಉಪಾಧ್ಯಕ್ಷೆ ಶ್ರೀಮತಿ ವನಿತಾ, ಜಿಲ್ಲಾ ಪಂಚಾಯತು ಸದಸ್ಯ ಧರಣೇಂದ್ರ ಕುಮಾರ್, ತಾಲೂಕು ಪಂಚಾಯತು ಸದಸ್ಯ ಶ್ರೀಮತಿ ರೂಪಲತಾ, ನೋಡೆಲ್ ಅಧಿಕಾರಿ ಸಾಮಾಜಿಕ ಅರಣ್ಯ ಇಲಾಖೆಯ ವಲಯಾರಣ್ಯಾಧಿಕಾರಿ ಗಣೇಶ್ ತಂತ್ರಿ, ಗ್ರಾ.ಪಂ ಸದ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ಸಭೆಯಲ್ಲಿ ದೇವರಪಾದೆ ಗಣಿಗಾರಿಕೆ, ಕುಡಿಯುವ ನೀರಿನ ಸಮಸ್ಯೆ ಹಾಗೂ ಇತರ ಅಭಿವೃದ್ಧಿ ವಿಚಾರಗಳ ಕುರಿತು ಚರ್ಚೆ ನಡೆಯಿತು. ಚರ್ಚೆಯಲ್ಲಿ ಮಾಜಿ ತಾಲೂಕು ಪಂಚಾಯತು ಸದಸ್ಯ ಜಯಂತ ಕೋಟ್ಯಾನ್ ಹಾಗೂ ಇತರರು ಭಾಗವಹಿಸಿದ್ದರು. ವಿವಿಧ ಇಲಾಖೆಗಳ ಇಲಾಖಾಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು. ಕಾರ್ಯದರ್ಶಿ ಶೇಖರ ಎಂ. ಧನ್ಯವಾದವಿತ್ತರು.