ಆರೋಪ ರಾಜಕೀಯ ಪ್ರೇರಿತ: ಕಾಂಗ್ರೆಸ್

ಕಳೆದ ಮಾ. ೧೭ರ ಬಿರುಗಾಳಿಗೆ ಉಂಟಾದ ಹಾನಿಗೆ ಸರ್ಕಾರ ಸ್ಪಂದಿಸಿಲ್ಲ ಎನ್ನುವ ಬಿಜೆಪಿಯ ಆರೋಪ ರಾಜಕೀಯ ಪ್ರೇರಿತ ಎಂದು ಬಂಟ್ವಾಳ ತಾಲುಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರಾ ತಿರುಗೇಟು ನೀಡಿದ್ದಾರೆ. ಭಾನುವಾರ ಸಂಜೆ ಬಿ.ಸಿ.ರೋಡಿನ ಪ್ರೆಸ್‌ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್‌ನ ಅಭಿವೃದ್ದಿ ಕಾರ್ಯಗಳಿಂದ ಕಂಗಾಲಾಗಿರುವ ಬಿಜೆಪಿ ನೀರಿನಿಂದ ತೆಗೆದ ಮೀನಿನಂತೆ ವಿಲವಿಲನೆ ಚಡಪಡಿಸುತ್ತಿದ್ದು ವಿನಾಕಾರಣ ಅಪಪ್ರಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದ್ದಾರೆ. ಘಟನೆ ನಡೆದಂದು ರಾತ್ರಿಯೇ ಜಿಲ್ಲಾ, ತಾಲೂಕು, ಗ್ರಾಮಪಂಚಾಯತ್‌ಗಳ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವಾನ ಹಾಗೂ ಸೂಕ್ತ ಪರಿಕಾರದ ಭರವಸೆ ನೀಡಿದ್ದಾರೆ. ಅಧಿಕಾರಿಗಳೊಂದಿಗೆ ತೆರಳಿ ರಸ್ತೆಗೆ ಬಿದ್ದಿದ್ದ ಮರಗಳನ್ನು ತೆರವುಗೊಳಿಸುವ ಕಾರ್ಯಗಳಲ್ಲೂ ಭಾಗಿಯಾಗಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮನಾಥ ರೈಯವರಿಗೆ ತಕ್ಷಣ ಮಾಹಿತಿ ನೀಡಿದ್ದು ಅವರ ಸೂಚನೆಯಂತೆ ಸಹಾಯಕ ಆಯುಕ್ತರು ಹಾಗೂ ಅಧಿಕಾರಿಗಳ ತಂಡ ಮರುದಿನ ಬೆಳಿಗ್ಗೆಯಿಂದಲೇ ಕಾರ್ಯಾಚರಣೆಯಲ್ಲಿ ಭಾಗಿಯಾಗಿದೆ. ಅಧಿಕಾರಿಗಳ ಸಭೆಯನ್ನೂ ನಡೆಸಿದ್ದಾರೆ. ಇಷ್ಟೆಲ್ಲವನ್ನು ಕಣ್ಣಾರೆ ಕಂಡಿದ್ದರೂ ಬಿಜೆಪಿ ಮುಖಂಡರು ಟೀಕೆಯಲ್ಲಿ ತೊಡಗಿದ್ದಾರೆ. ಶೀಘ್ರದಲ್ಲೇ ಎಲ್ಲರಿಗೂ ಪರಿಹಾರ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.