ಯುವ ಪ್ರತಿಭೆಗಳಿರುವುದು ಒಳ್ಳೆಯ ಬೆಳವಣಿಗೆ

ಕಲಾವಿದರಿಂದ ಕಲಾವಿರಿಗೆ ನೆರವು ನೀಡುವ ಕೆಲಸ ಸಮಾಜಕ್ಕೆ ಮಾದರಿಯಾಗಿದೆ ಎಂದು ನಿಟ್ಟೆ ವಿಶ್ವ ವಿದ್ಯಾನಿಲಯದ ಉಪಕುಲಪತಿ ಡಾ.ಎಂ.ಶಾಂತರಾಮಶೆಟ್ಟಿ ತಿಳಿಸಿದ್ದಾರೆ. ಅವರು ನಿನ್ನೆ ಮಂಗಳೂರು ಪುರಭವನದಲ್ಲಿ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್(ರಿ)ವತಿಯಿಂದ ಯಕ್ಷಧ್ರುವ ಪಟ್ಲ ಸಂಭ್ರಮ 2016 ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ್ದಾರೆ. ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ ಕಲಾವಿದ ಪಟ್ಲ ಸತೀಶ್ ಶೆಟ್ಟಿ ಯಕ್ಷಗಾನ ಕಲಾ ಕ್ಷೇತ್ರದ ಕಲಾವಿದರನ್ನು ನೆನಪಿಸುವ ಹಾಗೂ ಅವರ ಕುಟುಂಬಕ್ಕೆ ಆರೋಗ್ಯ ವಿಮೆಯನ್ನು ಮಾಡುವ ಕೆಲಸ, ತುರ್ತುಚಿಕಿತ್ಸೆಗೆ ನೆರವು ನೀಡುವ ಕೆಲಸಕ್ಕೆ ಮುಂದಾಗಿರುವುದು ಸಮಾಜಕ್ಕೆ ಮಾದರಿಯಾದ ಅನುಕರಣೀಯವಾದ ಕೆಲಸವಾಗಿದೆ. ಇತ್ತೀಚಿನ ಕೆಲವು ವರ್ಷಗಳಲ್ಲಿ ಯಕ್ಷರಂಗದಲ್ಲಿ ಹೊಸ ಹೊಸ ಯುವ ಪ್ರತಿಭೆಗಳು ಮುಂದೆ ಬರುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ ಎಂದು ಶಾಂತರಾಮ ಶೆಟ್ಟಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.