ಆರೋಪಿಗಳ ವಿರುದ್ಧ ದರೋಡೆ ಪ್ರಕರಣಕ್ಕೆ ಆಗ್ರಹ :ಹಿಂದೂ ಸಂಘಟನೆಯ ಮುಖಂಡರಿಂದ ಠಾಣೆ ಬಳಿ ಪ್ರತಿಭಟನೆ

Advt_NewsUnder_1
Advt_NewsUnder_1
Advt_NewsUnder_1

hindu

hindu 1 ಬೆಳ್ತಂಗಡಿ: ಗುರುವಾಯನಕೆರೆಯಲ್ಲಿ ನಡೆದ ಹಲ್ಲೆ ಪ್ರಕರಣವೊಂದರಲ್ಲಿ ಆರೋಪಿಗಳ ವಿರುದ್ಧ ದರೋಡೆ ಕೇಸು ಹಾಕಿಲ್ಲ ಎಂದು ಆಪಾದಿಸಿ ಹಿಂದೂ ಸಂಘಟನೆಯ ಕಾರ್ಯಕರ್ತರು ಮತ್ತು ನಾಯಕರುಗಳು ಮೆ. 26 ರಂದು ಬೆಳ್ತಂಗಡಿ ಠಾಣೆಗೆ ಭೇಟಿ ನೀಡಿ ಅಧಿಕಾರಿಗಳನ್ನು ಒತ್ತಾಯಿಸಿದರು. ಈ ವೇಳೆ ಮಾಜಿ ಶಾಸಕ ಪ್ರಭಾಕರ ಬಂಗೇರ, ಜಿಲ್ಲಾ ಬಿಜೆಪಿ ಅಧ್ಯಕ್ಷ ಪ್ರತಾಪಸಿಂಹ ನಾಯಕ್, ವಕೀಲರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಕುಮಾರ್ ಅಗರ್ತ, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರಂಜನ್ ಜಿ ಗೌಡ, ಧರ್ಮಾ ರಕ್ಷಾ ಪ್ರಮುಖ್ ಹರೀಶ್ ಪೂಂಜ, ಭಜರಂಗ ದಳ ಜಿಲ್ಲಾ ಸಂಚಾಲಕ ಭಾಸ್ಕರ ಧರ್ಮಸ್ಥಳ, ತಾ| ಅಧ್ಯಕ್ಷ ದಿನೇಶ್ ಮುಗುಳಿ, ಪ್ರಮುಖರಾದ ಪ್ರಭಾಕರ ಶೆಟ್ಟಿ ಉಪ್ಪಡ್ಕ, ನವೀನ್ ನೆರಿಯ, ಹರೀಶ್ ಮೂರ್ತಾಜೆ, ಭರತ್ ಇಂದಬೆಟ್ಟು, ಮೊದಲಾದವರು ಉಪಸ್ಥಿತರಿದ್ದರು. ಶುಕ್ರವಾರ ಬೆಳಿಗ್ಗೆ ಒಳಗೆ ಆರೋಪಿಗಳನ್ನು ಬಂಧಿಸದಿದ್ದಲ್ಲಿ ಮತ್ತೆ ಠಾಣೆಯ ಮುಂದೆ ಪ್ರತಿಭಟನೆ ಮಾಡುವುದಾಗಿ ಪ್ರತಿಭಟನಾಕಾರರು ಬೆದರಿಕೆ ಹಾಕಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.