ಕೊಲ್ಯ ರಮಾನಂದ ಸ್ವಾಮೀಜಿ ನಿಧನಕ್ಕೆ ಸಂತಾಪ

kolya ramananda swamiji copyಕೊಲ್ಯ ಶ್ರೀ ರಮಾನಂದ ಸ್ವಾಮೀಜಿಯವರ ನಿಧನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಗಾಢ ಸಂತಾಪ ವ್ಯಕ್ತಪಡಿಸಿದ್ದಾರೆ.
ಡಾ.ಡಿ ವೀರೇಂದ್ರ ಹೆಗ್ಗಡೆ : ರಮಾನಂದ ಸ್ವಾಮೀಜಿಯವರು ಸಂಘಟನಾ ಚತುರರಾಗಿದ್ದು ಹಿಂದೂ ಸಮಾಜದ ಸಂಘಟನೆ ಮತ್ತು ಬಲವರ್ಧನೆಗಾಗಿ ಶ್ರಮಿಸಿದ್ದಾರೆ. ಬಡವರು, ದೀನ-ದಲಿತರ ಅಭಿವೃದ್ಧಿ ಬಗ್ಗೆ ಅವರು ವಿಶೇಷ ಕಾಳಜಿ ಹೊಂದಿದ್ದರು. ಸದಾ ಜನ ಸಾಮಾನ್ಯರೊಂದಿಗೆ ಬೆರೆತು ಧಾರ್ಮಿಕ ಹಾಗೂ ಸಾಮಾಜಿಕ ಜಾಗೃತಿಗಾಗಿ ನಿರಂತರ ಶ್ರಮ ವಹಿಸುತ್ತಿದ್ದರು. ಅವರ ನಿಧನದಿಂದ ಸರ್ವಧರ್ಮೀಯರ ಹಿತಚಿಂತಕರೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಹೆಗ್ಗಡೆಯವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಬ್ರಹ್ಮಾನಂದ ಶ್ರೀ : ಕೊಲ್ಯ ಶ್ರೀಗಳ ಅಂತಿಮ ದರ್ಶನ ಹಾಗೂ ಸಮಾಧಿ ಸಂದರ್ಭದಲ್ಲಿ ಭಾಗವಹಿಸಿದ್ದ ಬ್ರಹ್ಮಾನಂದ ಶ್ರೀಗಳು ಸಂತಾಪ ವ್ಯಕ್ತಪಡಿಸುತ್ತ, ಶ್ರೀರಾಮ ಕ್ಷೇತ್ರದ ಕಾಮಗಾರಿಗೆ ಅಡಿಗಲ್ಲು ನೆರವೇರಿಸಿದ್ದರು. ಹಿರಿಯ ಸ್ವಾಮೀಜಿ ಆತ್ಮಾನಂದ ಸರಸ್ವತಿಯವರ ನಿಕಟವರ್ತಿಯಾಗಿ ಭಾಗವಹಿಸಿದ್ದನ್ನು ನೆನಪಿಸಿಕೊಂಡಿದ್ದಾರೆ. ಅವರ ಅಗಲುವಿಕೆಯಿಂದ ಶ್ರೇಷ್ಟ ಸಂತರೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.