ವೇಣೂರು: ಹೊನ್ನಯ್ಯ ಕಾಟಿಪಳ್ಳರಿಗೆ ಸಮ್ಮಾನ

venurವೇಣೂರು: ಗುಂಡೂರಿ ಶ್ರೀಗುರು ಚೈತನ್ಯ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಹೊನ್ನಯ್ಯ ಕಾಟಿಪಳ್ಳ ಅವರನ್ನು ವೇಣೂರು ಶ್ರೀ ಆದಿಶಕ್ತಿ ಭಜನಾ ಮಂದಿರದ ಸಭಾಭವನದಲ್ಲಿ ಶಿವಾಜಿ ಸೇವಾ ಟ್ರಸ್ಟ್ ವೇಣೂರು ಇದರ ವತಿಯಿಂದ ಜರಗಿದ ಉಚಿತ ಪುಸ್ತಕ ವಿತರಣಾ ಸಮಾರಂಭದಲ್ಲಿ ಸಮ್ಮಾನಿಸಲಾಯಿತು.
ನಾರಾವಿ ಕ್ಷೇತ್ರದ ಜಿ.ಪಂ. ಸದಸ್ಯ ಪಿ. ಧರಣೇಂದ್ರ ಕುಮಾರ್, ನಿಟ್ಟಡೆ ಕುಂಭಶ್ರೀ ಆಂಗ್ಲಮಾಧ್ಯಮ ವಸತಿ ಶಾಲೆಯ ಸಂಚಾಲಕ ಗಿರೀಶ್ ಕೆ.ಎಚ್., ಅಳದಂಗಡಿ ಕ್ಷೇತ್ರದ ಜಿ.ಪಂ. ಸದಸ್ಯ ಶೇಖರ ಕುಕ್ಕೇಡಿ, ವೇಣೂರು ತಾ.ಪಂ. ಸದಸ್ಯ ಕೆ. ವಿಜಯ ಗೌಡ, ಗ್ರಾ.ಪಂ. ಅಧ್ಯಕ್ಷೆ ಮೋಹಿನಿ ವಿಶ್ವನಾಥ ಶೆಟ್ಟಿ, ಉಪಾಧ್ಯಕ್ಷ ಅರುಣ್ ಕ್ರಾಸ್ತ, ವೇಣೂರು ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕ ಲೋಲಾಕ್ಷ ಕೆ., ಸದಸ್ಯ ವಿಕ್ಟರ್ ಮಿನೇಜಸ್, ಪತ್ರಕರ್ತ ಪದ್ಮನಾಭ ವೇಣೂರು ಹಾಗೂ ಶಿವಾಜಿ ಸೇವಾ ಟ್ರಸ್ಟ್ ನ ಪದಾಧಿಕಾರಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.