ಜೂ.21 : ವಿಶ್ವಯೋಗ ದಿನಾಚರಣೆ-ಯೋಗ ಪ್ರಾತ್ಯಕ್ಷಿಕೆ

Advt_NewsUnder_1
Advt_NewsUnder_1

Yogasana copyಬೆಳ್ತಂಗಡಿ : ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ರಾಷ್ಟ್ರೀಯ ಸೇವಾ ಯೋಜನೆಯ ಆಯ್ದ ಪ್ರತಿನಿಧಿಗಳಿಗೆ ಹಾಗೂ ಯೋಜನಾಧಿಕಾರಿಗಳಿಗೆ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ಸಂಯೋಜನೆಯಲ್ಲಿ 3 ದಿನಗಳ ಯೋಗ ಮತ್ತು ಜೀವನ ಶೈಲಿಯ ಕಾರ್ಯಾಗಾರ ಇದರ ಉದ್ಘಾಟನೆಯು ಜೂ.19ರಂದು ಬೆಳಿಗ್ಗೆ 11 ಗಂಟೆಗೆ ಉಜಿರೆಯ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯದಲ್ಲಿ ನಡೆಯಲಿದೆ ಎಂದು ಕಾಲೇಜಿನ ಪ್ರಾಚಾರ್ಯ ಡಾ. ಪ್ರಶಾಂತ್ ಶೆಟ್ಟಿ ಹೇಳಿದರು.
ಕಾರ್ಯಕ್ರಮವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಗೂಗಲ್ ಇದರ ಭಾರತದ ಅಧ್ಯಕ್ಷ ಚೇತನ್ ಕೃಷ್ಣ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಜೂ. 21ರಂದು ಬೆಳಿಗ್ಗೆ 7 ರಿಂದ 7.45 ರ ವರೆಗೆ ಒಂದು ಸಾವಿರ ಶಿಬಿರಾರ್ಥಿಗಳಿಂದ ಸಾಮೂಹಿಕ ಯೋಗ ಪ್ರಾತ್ಯಕ್ಷತೆ ಶ್ರೀ ಧ. ಮಂ. ಅಡಿಟೋರಿಯಂನಲ್ಲಿ ನಡೆಯಲಿದ್ದು, ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆ, ಸಚಿವ ಅಭಯಚಂದ್ರ ಜೈನ್, ಸ್ಥಳೀಯ ಶಾಸಕರು, ಡಿ. ಹರ್ಷೇಂದ್ರ ಕುಮಾರ್, ಡಾ. ಬಿ. ಯಶೋವರ್ಮ, ವಿಜಯರಾಘವ ಪಡ್ವೆಟ್ನಾಯ, ರಾಷ್ಟ್ರೀಯ ಸೇವಾ ಯೋಜನೆ ನಿರ್ದೇಶಕ ಫಜಾರ್, ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ. ವಸಂತ ಶೆಟ್ಟಿ ಭಾಗವಹಿಸಲಿದ್ದಾರೆ. ಮುಖ್ಯವಾಗಿ ವಿ.ವಿಗಳ ಎನ್.ಎಸ್.ಎಸ್. ಪ್ರತಿನಿಧಿಗಳು ತಲಾ 20ರಂತೆ, ರಾಜೀವ ಗಾಂಧಿ ವಿಶ್ವ ವಿದ್ಯಾನಿಲಯದ 100 ಪ್ರತಿನಿಧಿಗಳು, ಸೇವಾ ಯೋಜನಾಧಿಕಾರಿಗಳು, ಪ್ರಕೃತಿ ಚಿಕಿತ್ಸಾ ಯೋಗ ಮಹಾ ವಿದ್ಯಾಲಯದ 300 ವಿದ್ಯಾರ್ಥಿಗಳು ಹಾಗೂ ಸ್ಥಳೀಯ ಯೋಗ ಶಿಬಿರಾರ್ಥಿಗಳು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.