HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಲಾಯಿಲದಲ್ಲಿ ಜಾಗೃತಿ ಸೌಧ ಲೋಕಾರ್ಪಣೆ

1

2

ಬೆಳ್ತಂಗಡಿ : ಜೂ.11 ಉಜಿರೆ ಲಾಲದ ಕ್ಷಯ ರೋಗದ ಸಮಸ್ಯೆಗೆ ಕಾರಣವಾಗುವ ಮದ್ಯಪಾನ ಮತ್ತು ಮಾದಕ ವಸ್ತುಗಳ ತಡೆಗಟ್ಟುವಿಕೆಗಾಗಿ ’ಜಾಗೃತಿ ಸೌಧ’ ಕಟ್ಟಡ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರವು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮೆಡಿಕಲ್ ಟ್ರಸ್ಟ್ ಮತ್ತು ಬೆಳ್ತಂಗಡಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಇದರ ಆಶ್ರಯದಲ್ಲಿ ಉದ್ಘಾಟನೆಯು ನೇರವೇರಿತು. ಜನಜಾಗೃತಿ ವೇದಿಕೆ ಗೌರವಾಧ್ಯಕ್ಷ, ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಿದ್ದರು.
ಸ್ವಾಸ್ಥ್ಯ ಸಂಕಲ್ಪದ ಮಾಹಿತಿ ನೀಡುವ ಕಿರುಚಿತ್ರ ಬಿಡುಗಡೆಯನ್ನು ದ.ಕ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲ್  ಬಿಡುಗಡೆ ಮಾಡಿದರು. ಬೆಂಗಳೂರು ಕರ್ನಾಟಕ ರಾಜ್ಯ ಮಧ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಎಂ.ಆರ್ ರಂಗಶ್ಯಾಮಯ್ಯ, ಉಜಿರೆ ಶ್ರೀ.ಧ.ಮಂ ಎಜ್ಯುಕೇಶನಲ್ ಟ್ರಸ್ಟ್‌ನ ಕಾರ್ಯದರ್ಶಿ ಡಿ.ಹಷೇಂದ್ರ ಕುಮಾರ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ಸತೀಶ್ ಹೊನ್ನವಳ್ಳಿ ಮತ್ತು ಧರ್ಮಸ್ಥಳ ಶ್ರೀ.ಕ್ಷೇ.ಧ.ಗ್ರಾ.ಯೋಜನಾ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ.ಎಲ್.ಎಚ್.ಮಂಜುನಾಥ್ ಮುಖ್ಯ ಅತಿಥಿಗಳಾಗಿದ್ದರು.
ಲಾಲ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀಮತಿ ಸೌಮ್ಯಲತಾ ಜಯಂತ ಗೌಡ, ತಾಲೂಕು ಪಂಚಾಯತ್ ಸದಸ್ಯ ಸುದಾಕರ ಬಿ.ಎಲ್, ಗ್ರಾ ಪಂಚಾಯತ್ ಅಧ್ಯಕ್ಷ ಶ್ರೀಮತಿ ವೀಣಾ ರಾವ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.