ತಮ್ಮನ್ನು ಶನಿ ಎಂದು ಕರೆದಿದ್ದ ಜೆಡಿಎಸ್ ಭಿನ್ನಮತೀಯ ಶಾಸಕರಿಗೆ ಮಂಗಳವಾರ ತಿರುಗೇಟು ನೀಡಿರುವ ಮಾಜಿ ಸಚಿವ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರು, ಶನಿ ಈಗ ಕಾಂಗ್ರೆಸ್ಗೆ ಶಿಫ್ಟ್ ಆಗಿದೆ ಎಂದು ಹೇಳಿದ್ದಾರೆ. ನಿನ್ನೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ರೇವಣ್ಣ, ಭಿನ್ನಮತೀಯ ಶಾಸಕರ ವಿರುದ್ದ ವಾಗ್ಧಾಳಿ ನಡೆಸಿದ ರೇವಣ್ಣ, ಸಮ್ಮಿಶ್ರ ಸರ್ಕಾರದಲ್ಲಿ ನನ್ನನ್ನು ಮಂತ್ರಿ ಮಾಡಿ ಎಂದಿರಲಿಲ್ಲ ಮತ್ತು ಎಂದಿಗೂ ನಾನು ಅಧಿಕಾರಕ್ಕಾಗಿ ಆಸೆ ಪಟ್ಟು ಕೆಲಸ ಮಾಡಿಲ್ಲ ಎಂದಿದ್ದಾರೆ. ನಾನು ನಮ್ಮ ಅಪ್ಪನ ಮಾತು ಕೇಳಿಕೊಂಡು ಬಂದಿದ್ದಾನೆ. ನಾನು ೧೯೭೭ರಿಂದಲೂ ರಾಜಕೀಯದಲ್ಲಿದ್ದೇನೆ ಎಂದು ಹೇಳಿದ್ದಾರೆ.