ಜನಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷ ವಸಂತ ಸಾಲಿಯಾನ್‌ರಿಗೆ ಸ್ವಸ್ಥ ಸಮಾಜ ಯೋಗಿ ಪ್ರಶಸ್ತಿ

janajagruthi vedike vasantha salian sanmana copyಧರ್ಮಸ್ಥಳ : ದುಶ್ಚಟ ದುರಾಭ್ಯಾಸಗಳಿಗೆ ಬಲಿಯಾಗಿರುವ ಕುಟುಂಬಗಳ ರಕ್ಷಣೆಗೆಂದೇ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಆರಂಭವಾದ ಜನಜಾಗೃತಿ ವೇದಿಕೆಯ ಸ್ಥಾಪಕ ಅಧ್ಯಕ್ಷರಾಗಿ 25 ವರ್ಷಗಳ ಅವಿರತ ಸೇವೆ ನೀಡಿದ ಕೆ. ವಸಂತ ಸಾಲಿಯಾನ್ ರವರು ಸ್ವಸ್ಥ ಸಮಾಜಯೋಗಿ ಗೌರವಕ್ಕೆ ಪಾತ್ರರಾಗಿದ್ದು ಜಾಗೃತಿ ಸೌಧ ಕಟ್ಟಡ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಎಂ.ಆರ್.ರಂಗಶ್ಯಾಮಯ್ಯ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಡಿ.ಸುರೇಂದ್ರ ಕುಮಾರ್, ಕಾರ‍್ಯದರ್ಶಿ ಹರ್ಷೇಂದ್ರ ಕುಮಾರ್, ಜನಜಾಗೃತಿ ವೇದಿಕೆ ರಾಜಾಧ್ಯಕ್ಷ ಸತೀಶ್ ಹೊನ್ನವಳ್ಳಿ, ಉಜಿರೆ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ವಿಜಯ ರಾಘವ ಪಡ್ವೆಟ್ನಾಯ, ಜಿ.ಪ.ಸ ಸೌಮ್ಯಲತಾ, ತಾ.ಪ.ಸ ಸುಧಾಕರ್, ಗ್ರಾ.ಪಂ ಅಧ್ಯಕ್ಷೆ ವೀಣಾ ರಾವ್ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.