ಬೆಳ್ತಂಗಡಿ : ದ.ಕ.ಜಿಲ್ಲಾ ಬಿಜೆಪಿ ಯುವಮೋರ್ಚಾ ನೂತನ ಅಧ್ಯಕ್ಷರಾಗಿ ಹರೀಶ್ ಪೂಂಜ

poonjaಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವಮೋರ್ಚಾ ನೂತನ ಅಧ್ಯಕ್ಷರಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಕ್ರಿಯ ಕಾರ್ಯಕರ್ತ ಹರೀಶ್ ಪೂಂಜ ಗರ್ಡಾಡಿಯವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ನೇಮಕ ಮಾಡಿದ್ದಾರೆ.
ಬೆಳ್ತಂಗಡಿ ತಾಲೂಕಿನ ಗರ್ಡಾಡಿ ನಿವಾಸಿಯಾಗಿರುವ ಅವರು ಶ್ರೀಮತಿ ನಳಿನಿ ಮತ್ತು ಮುತ್ತಣ್ಣ ಪೂಂಜರವರ ಪುತ್ರ. ಇವರು ಪಡಂಗಡಿ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ, ಪುಂಜಾಲಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಣ ಪಡೆದು ಮಡಂತ್ಯಾರ್ ಸೇರ್ಕೆಡ್ ಹಾರ್ಟ್ ಕಾಲೇಜನಲ್ಲಿ ಪದವಿ ಮುಗಿಸಿ, ಮಂಗಳೂರಿನ ಎಸ್.ಡಿ.ಎಂ ಕಾಲೇಜನಲ್ಲಿ ಕಾನೂನು ಪದವಿ ಪಡೆದು ವಕೀಲರಾಗಿ ಜತೆಗೆ ಉದ್ಯಮಿಯಾಗಿದ್ದಾರೆ.
ಅರೆಸ್ಸೆಸ್‌ನ ಧರ್ಮ ಜಾಗರಣಾ ಪ್ರಾಂತ ನಿಧಿ ಪ್ರಮುಖ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಅವರು ವಿದ್ಯಾರ್ಥಿ ಪರಿಷತ್‌ನ ಕಾರ್ಯಕರ್ತರಾಗಿ ಕೆಲಸ ಮಾಡಿದ್ದರು. ಎ.ಬಿ.ವಿ.ಪಿ ತಾಲೂಕು ಪ್ರಮುಖ್, ಜಿಲ್ಲಾ ಸಂಚಾಲಕ, ರಾಜ್ಯ ಸಹ ಕಾರ್ಯದರ್ಶಿ, ರಾಷ್ಟ್ರೀಯ ಕಾರ‍್ಯಕಾರಿಣಿ ಸದಸ್ಯರಾಗಿ ಕರ್ತವ್ಯ ನಿರ್ವಹಿಸಿದ್ದರು. ಮಂಗಳೂರು ವಿವಿಯ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಸಂಚಾಲಕರಾಗಿಯೂ ಕರ್ತವ್ಯ ನಿರ್ವಹಿಸಿದ್ದರು. ಎ.ಬಿ.ವಿ.ಪಿಯ ಪೂರ್ಣಾವಧಿ ಕಾರ್ಯಕರ್ತರಾಗಿ ಬೆಳಗಾವಿ ನಗರ ಸಂಘಟನಾ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.
ನಂದಿಬೆಟ್ಟು ದೇವಸ್ಥಾನ ಜೀರ್ಣೋದ್ಧಾರ ಆರ್ಥಿಕ ಸಮಿತಿ ಅಧ್ಯಕ್ಷರಾಗಿ, ಡೆಂಜೋಳಿ ಮಹಾಲಿಂಗೇಶ್ವರ ದೇವಸ್ಥಾನ, ಬಳೆಂಜ ಪಂಚಲಿಂಗೇಶ್ವರ ದೇವಸ್ಥಾನ, ನಾವೂರು ಗೋಪಾಲಕೃಷ್ಣ ದೇವಸ್ಥಾನ, ಶಿಬಾಜೆ ಮೊಂಟೆತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶ ಸಮಿತಿ ಅಧ್ಯಕ್ಷರಾಗಿ, ಬೆಳ್ತಂಗಡಿ ಕೃಷ್ಣೋತ್ಸವ ಸಮಿತಿ, ಶಿಶಿಲ ಓಟ್ಲ ಬ್ರಹ್ಮ ಬೈದರ್ಕಳ ಗರಡಿ, ಇಳಂತಿಲ ಮಲ್ಲಿಕಾರ್ಜುನ ದೇವಸ್ಥಾನ, ಪಡಂಗಡಿ ಸತ್ಯಸಾರ ದೈವಸ್ಥಾನದ ಗೌರವಾಧ್ಯಕ್ಷರಾಗಿ, ಎತ್ತಿನಹೊಳೆ ಯೋಜನೆ ವಿರೋಧಿ ಸಮಿತಿಯ ಬೆಳ್ತಂಗಡಿ ತಾಲೂಕು ಕೋಶಾಧಿಕಾರಿಯಾಗಿ ಕೆಲಸ ಮಾಡಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.