ಸಮಸ್ಯೆಗಳನ್ನು ಬೇಗ ಪರಿಹರಿಸಿ: ಎಸ್.ಎಂ.ಕೃಷ್ಣ

ಸಾರಿಗೆ ನೌಕರರ ಸಮಸ್ಯೆಗಳನ್ನು ಬೇಗ ಪರಿಹರಿಸಿ. ಇಲ್ಲವಾದರೆ ಸಮಸ್ಯೆ ಜಟಿಲವಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ರಾಜ್ಯ ಸರಕಾರಕ್ಕೆ ಕಿವಿಮಾತು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೇತನ ಪರಿಷ್ಕರಣೆಗೆ ಆಗ್ರಹಿಸಿ ಸಾರಿಗೆ ನೌಕರರು ಕೈಗೊಂಡಿರುವ ರಾಜ್ಯಾದ್ಯಂತ ಮುಷ್ಕರ ಎರಡನೆಯ ದಿನಕ್ಕೆ ಕಾಲಿಟ್ಟಿದೆ. ಇದರಿಂದ ಲಕ್ಷಾಂತರ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ರಾಜ್ಯ ಸರಕಾರ ಸಾರಿಗೆ ನೌಕರರ ಸಮಸ್ಯೆಗಳನ್ನು ಬೇಗನೆ ಪರಿಹರಿಸಬೇಕು. ಇಲ್ಲವಾದರೆ ಸಮಸ್ಯೆ ಜಟಿಲವಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದು, ಇದರಿಂದಾಗಿ ಪ್ರಯಾಣಿಕರು ಪರಿತಪಿಸುವಂತಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.