HomePage_Banner_
HomePage_Banner_
HomePage_Banner_

16 ವರ್ಷಗಳ ಉಪವಾಸ ಹೋರಾಟ ಅಂತ್ಯ

ಸೇನಾಪಡೆಗಳ ದೌರ್ಜನ್ಯದ ವಿರುದ್ಧ ಕಳೆದ 16 ವರ್ಷಗಳಿಂದ ಸುದೀರ್ಘವಾಗಿ ಅಮರಣಾಂತ ಉಪವಾಸ ಸತ್ಯಾಗ್ರಹದ ಹೋರಾಟ ನಡೆಸುತ್ತಿದ್ದ ಮಣಿಪುರದ ಐರನ್ ಲೇಡಿ ಎಂದೇ ಹೆಸರಾಗಿದ್ದ ಐರೋಮ್ ಶರ್ಮಿಳಾ ಇದೀಗ ತಮ್ಮ ಉಪವಾಸ ಸತ್ಯಾಗ್ರಹವನ್ನು ಆಗಸ್ಟ್ ೯ರಂದು ಅಂತ್ಯಗೊಳಿಸಲು ನಿರ್ಧರಿಸಿದ್ದಾರೆ. ಅಲ್ಲದೇ ಆಕೆ ಮದುವೆಯಾಗಲು ಬಯಸಿದ್ದು, ಮುಂದಿನ ದಿನಗಳಲ್ಲಿ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ. ನನ್ನ ಹೋರಾಟಕ್ಕೆ ಸರ್ಕಾರ ಯಾವುದೇ ಭರವಸೆ ನೀಡಿಲ್ಲ, ಇದೀಗ ನಾನು ನನ್ನ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿ ಚುನಾವಣೆಗೆ ಸ್ಪರ್ಧಿಸಿ ಹೋರಾಡುವ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವ ವಿಶ್ವಾಸ ಹೊಂದಿರುವುದಾಗಿ ಸುದ್ದಿ ಸಂಸ್ಥೆಗೆ ಐರೋಮ್ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *